ETV Bharat / state

ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ - V Srinivas Prasad announced his retirement from electoral politics

ಆತ್ಮತೃಪ್ತಿಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿ ಆಗುತ್ತಿದ್ದೇನೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.

V Srinivas Prasad
ವಿ.ಶ್ರೀನಿವಾಸ್ ಪ್ರಸಾದ್
author img

By

Published : Aug 6, 2021, 11:51 AM IST

ಮೈಸೂರು: ಮೈಸೂರು ಭಾಗದಲ್ಲಿ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿರುವ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಅವರು ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ರಾಜಕೀಯ ನಿವೃತ್ತಿ ಕುರಿತು ಮಾಹಿತಿ ನೀಡಿದ ವಿ.ಶ್ರೀನಿವಾಸ್ ಪ್ರಸಾದ್

ಇಂದು 75 ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಅವರು, ರಾಜಕೀಯ ಜೀವನದಲ್ಲಿ ತೃಪ್ತಿ ಹೊಂದಿದ್ದೇನೆ. ಹಾಗಾಗಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಜೊತಗೆ 50 ವರ್ಷದ ರಾಜಕೀಯ ಜೀವನದ ಏಳುಬೀಳುಗಳಿನ ಪ್ರಮುಖ ಘಟನೆಗಳನ್ನು ಪುಸ್ತಕದ ರೂಪದಲ್ಲಿ ಬರೆಯಲಾಗಿದೆ ಎಂದು ಹೇಳಿದರು.

4 ವರ್ಷದ ಹಿಂದೆಯೇ ರಾಜಕೀಯ ನಿವೃತ್ತಿ ಹೊಂದಲು ಬಯಸಿದ್ದೆ. ಆದರೆ ನಂತರದ ಕೆಲ ರಾಜಕೀಯ ಬೆಳವಣಿಗೆಗಳಿಂದ ಮತ್ತೆ ಅನಿವಾರ್ಯವಾಗಿ ಸ್ಪರ್ಧೆ ಮಾಡಬೇಕಾಯಿತು. ಆದರೆ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಈ‌ ಮಾತಿನಿಂದ ಹಿಂದೆ ಸರಿಯುವುದೂ ಇಲ್ಲ ಎಂದು ಹೇಳಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.