ಮೈಸೂರು: ಬೈಕ್ ಮೇಲೆ ಕುಳಿತು ಮಾತನಾಡುತ್ತಾ ನಿಂತಿದ್ದ ಇಬ್ಬರು ವ್ಯಕ್ತಿಗಳಿಗೆ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದಲ್ಲಿ ನಡೆದಿದೆ.
ಧನಂಜಯ ಅಲಿಯಾಸ್ ಧನಪಾಲ (41) ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ. ಈತ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಸುರಗಳ್ಳಿ ಗ್ರಾಮದ ಹೊರವಲಯದಲ್ಲಿ ಬೈಕ್ನ ಮೇಲೆ ಕುಳಿತು ಮಾತನಾಡುತ್ತಾ ಇದ್ದರು. ಈ ಸಂದರ್ಭದಲ್ಲಿ ಅಪರಿಚಿತ ಕಾರೊಂದು ವೇಗವಾಗಿ ಬಂದು ನಿಂತಿದ್ದ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಇನ್ನು ಇವನ ಸ್ನೇಹಿತ ಗಂಗಾಧರ ಎಂಬಾತ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಮಾಡಿದ ಕಾರಿನ ಚಾಲಕ ಪರಾರಿಯಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ಮಾಡಿ ತನಿಖೆ ಕೈಗೊಂಡಿದ್ದಾರೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.