ಮೈಸೂರು: ಅರಮನೆಯಲ್ಲಿ ಶರನ್ನವರಾತ್ರಿಯ ಕೊನೆಯ ದಿನವಾದ ಇಂದು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯದಶಮಿ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
ಚಾಮುಂಡಿ ದೇವಿಯ ವಿಗ್ರಹವನ್ನು ಕನ್ನಡಿ ತೊಟ್ಟಿಯಿಂದ ಚಾಮುಂಡಿ ತೊಟ್ಟಿಗೆ ರವಾನಿಸಿ, ನಂತರ ಪಟ್ಟದ ಕತ್ತಿ ಭುವನೇಶ್ವರಿ ದೇವಾಲಯಕ್ಕೆ ಕಳುಹಿಸಲಾಗಿತ್ತು. ಬಳಿಕ ವಿಜಯ ಯಾತ್ರೆ ಆರಂಭಗೊಳ್ಳಲಿದ್ದು, ಬೆಳ್ಳಿ ಪಲ್ಲಕ್ಕಿಯಲ್ಲಿ ಪಟ್ಟದ ಕತ್ತಿ, ಕಾರಿನಲ್ಲಿ ಯದುವೀರ್ ಕುಳಿತು ವಿಜಯಯಾತ್ರೆ ನೆರವೇರಿಸಿದ್ದಾರೆ. ಅರಮನೆ ಮುಖ್ಯದ್ವಾರದಿಂದ ಭುವನೇಶ್ವರಿ ದೇಗುಲದವರೆಗೂ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು, ಪೊಲೀಸ್ ಬ್ಯಾಂಡ್ನೊಂದಿಗೆ ಬೆಳ್ಳಿ ಪಲ್ಲಕ್ಕಿಯಲ್ಲಿ ಆಯುಧಗಳ ಹೊತ್ತು ಬಳಿಕ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿದ್ದಾರೆ.
ಸಂಜೆ 4.36ರಿಂದ 4.46ರ ಶುಭ ಮೀನ ಲಗ್ನದಲ್ಲಿ ಕೋಟೆ ಆಂಜನೇಯ ಸ್ವಾಮಿ ದೇಗುಲದ ಬಳಿ ವಿಶೇಷ ಪೂಜೆ ನೆರವೇರಲಿದೆ.
ಸಂಜೆ 5ರಿಂದ 5.30ರ ಶುಭ ಲಗ್ನದಲ್ಲಿ ಚಿನ್ನದ ಅಂಬಾರಿಯಲ್ಲಿ ವಿರಾಜಮಾನರಾಗಿರುವ ಚಾಮುಂಡೇಶ್ವರಿ ದೇವಿಗೆ ಸಿಎಂ ಬೊಮ್ಮಾಯಿ, ಯದುವೀರ ಕೃಷ್ಣದತ್ತ ಒಡೆಯರ್ ಪುಷ್ಪಾರ್ಚನೆ ಮಾಡಲಿದ್ದಾರೆ.
ಇದನ್ನೂ ಓದಿ: ಜಗತ್ಪ್ರಸಿದ್ಧ ಜಂಬೂಸವಾರಿಗೆ ಕೆಲವೇ ಗಂಟೆಗಳು ಬಾಕಿ; ಗಜಪಡೆಗೆ ವಿಶೇಷ ಅಲಂಕಾರ