ಮೈಸೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ನೀಡುತ್ತಿರುವ ಲಸಿಕೆ ಬೇಡವೆಂದು ಗ್ರಾಮಸ್ಥರು ಪಟ್ಟು ಹಿಡಿದ ಬೆನ್ನೆಲ್ಲೇ ಅಧಿಕಾರಿಗಳು ಮನೆ ಮನೆಗೆ ತೆರಳಿ ಜನರ ಮನವೊಲಿಸಲು ಮುಂದಾದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.
ನಂಜನಗೂಡು ತಾಲೂಕು ಕೋಚನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿರುವ ಅಧಿಕಾರಿಗಳು, ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ. ಲಸಿಕೆ ಹಾಕಿಸಿಕೊಳ್ಳಲು ಹಿಂಜರಿದ ಗ್ರಾಮಸ್ಥರು, ಅಧಿಕಾರಿಗಳ ಜೊತೆ ವಾಗ್ವಾದ ನಡೆಸಿದರು.
ಆದರೆ, ಲಸಿಕೆ ಹಾಕಿಸಿಕೊಳ್ಳುವಂತೆ ಅಧಿಕಾರಿಗಳು ಪಟ್ಟುಹಿಡಿದಿದ್ದಾರೆ. ಮುಂದಾಗುವ ಅಪಾಯಕ್ಕೆ ಪರಿಹಾರ ಕಟ್ಟಿಕೊಡಿ ಎಂದು ಗ್ರಾಮಸ್ಥರು ಕಂಡೀಷನ್ ಹಾಕಿದ್ದಾರೆ. ಮೈಸೂರು ತಾಲೂಕು ತಹಶೀಲ್ದಾರ್ ರಕ್ಷಿತ್ ನೇತೃತ್ವದ ಅಧಿಕಾರಿಗಳ ತಂಡ, ಕೊನೆಗೂ ಗ್ರಾಮಸ್ಥರ ಮನವೊಲಿಸಿವಲ್ಲಿ ಯಶಸ್ವಿಯಾಗಿದ್ದಾರೆ.
ಓದಿ : ಭಾರತದಲ್ಲಿ ಕೋವಿಡ್ ತಾಂಡವ.. ಒಂದೇ ದಿನ 4 ಲಕ್ಷ ಕೇಸ್ ಪತ್ತೆ, 3,523 ಮಂದಿ ಸೋಂಕಿಗೆ ಬಲಿ