ETV Bharat / state

ಜಾತಿ, ಪಕ್ಷ ಎನ್ನದೇ ಕೆಲಸ ಮಾಡುವವರಿಗೆ ಮತ ನೀಡಿ: ಹೆಚ್.ಡಿ.ಕುಮಾರಸ್ವಾಮಿ

author img

By

Published : Feb 23, 2022, 10:47 PM IST

ಕಳೆದ ೨ ವರ್ಷಗಳಿಂದ ಕೊರೊನಾ ಕಾರಣದಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದು, ಇಂತಹ ಸಂಕಷ್ಟ ಸಂದರ್ಭದಲ್ಲಿ ಜಾತಿ ಮತ್ತು ಧರ್ಮದ ವಿಚಾರವನ್ನು ಇಟ್ಟುಕೊಂಡು ರಾಜಕೀಯ ಲಾಭ ಗಳಿಸಲು ಯಾರು ಮುಂದಾಗಬಾರದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.

Vote for those who work  for nation h d kumara swami
ಜಾತಿ,ಪಕ್ಷ ಎನ್ನದೇ ಕೆಲಸ ಮಾಡುವವರಿಗೆ ಮತನೀಡಿ: ಹೆಚ್.ಡಿ.ಕುಮಾರಸ್ವಾಮಿ

ಮೈಸೂರು: ನಮ್ಮ ಕುಟುಂಬ ದೇವರ ಬಗ್ಗೆ ಅಪಾರ ನಂಬಿಕೆಯನ್ನು ಇಟ್ಟುಕೊಂಡಿದೆ. 2023ರ ವಿಧಾನಸಭೆಯ ಚುನಾವಣೆಗೆ ನಮ್ಮದೆ ಆದ ಕಲ್ಪನೆಯನ್ನು ಹೊಂದಿದ್ದು, ಅದರಡಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲಿದ್ದೇವೆ. ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದರು.

ಕೆ.ಆರ್.ನಗರ ತಾಲೂಕಿನ ಚಿಕ್ಕಭೇರ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯ ಉದ್ಘಾಟಿಸಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಜಾತಿ ಮತ್ತು ಪಕ್ಷ ರಾಜಕಾರಣ ಮಾಡದೇ, ಜನರ ಏಳಿಗೆಗಾಗಿ ದುಡಿಮೆ ಮಾಡುವಂತವರಿಗೆ ಮತ ನೀಡಬೇಕು ಎಂದು ಹೇಳಿದರು.

ಉಡುಪಿ ಜಿಲ್ಲೆಯ ಶಾಲೆಯೊಂದರಲ್ಲಿ ಸಣ್ಣ ಬಟ್ಟೆಗಾಗಿ ದೊಡ್ಡ ಮಟ್ಟದ ಗೊಂದಲ ಮತ್ತು ಘರ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಕಳೆದ 2 ವರ್ಷಗಳಿಂದ ಕೊರೊನಾ ಕಾರಣದಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಿದ್ದು, ಇಂತಹ ಸಂಕಷ್ಟ ಸಂದರ್ಭದಲ್ಲಿ ಜಾತಿ ಮತ್ತು ಧರ್ಮದ ವಿಚಾರವನ್ನು ಇಟ್ಟುಕೊಂಡು ರಾಜಕೀಯ ಲಾಭಗಳಿಸಲು ಯಾರು ಮುಂದಾಗಬಾರದು. ರಾಜ್ಯದಲ್ಲಿ 26 ಲಕ್ಷ ವಿದ್ಯಾವಂತ ನಿರುದ್ಯೋಗಿಗಳಿದ್ದು, ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನಡೆದುಕೊಳ್ಳಬೇಕು. ಈ ವಿಚಾರಗಳನ್ನು ರಾಜಕೀಯ ಲಾಭಕ್ಕೆ ಬಳಸಬಾರದು. ಸಂವಿಧಾನದ ಆಶಯದಡಿ ಸಾಮರಸ್ಯದಿಂದ ಜೀವನ ನಡೆಸುವುದು ಉತ್ತಮ ಎಂದು ಹೆಚ್​ಡಿಕೆ ಸಲಹೆ ನೀಡಿದರು.

ಇದನ್ನೂ ಓದಿ: ಹಿಜಾಬ್ ನಿರ್ಬಂಧ ವಿದ್ಯಾರ್ಥಿಗಳಿಗಷ್ಟೇ ಶಿಕ್ಷಕರಿಗಲ್ಲ: ಫೆ.10ರ ಆದೇಶಕ್ಕೆ ಸ್ಪಷ್ಟನೆ ನೀಡಿದ ಕೋರ್ಟ್

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.