ETV Bharat / state

ಕಬಿನಿಯಲ್ಲಿ ಹೆಚ್ಚಿದ ನೀರಿನ ಮಟ್ಟ..  ಜಲಾಶಯ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ಕೊಟ್ಟ ಅಧಿಕಾರಿಗಳು - Nanjangud-Ooty bridge bridge sinking

ವಯನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಕಬಿನಿ ಜಲಾಶಯ ತುಂಬುವ ಹಂತದಲ್ಲಿದ್ದು, 80 ಸಾವಿರ ಕ್ಯೂಸೆಕ್ ನೀರನ್ನು ಜಲಯಾಶಯದಿಂದ ಹರಿ ಬಿಡಲಾಗುತ್ತಿದ್ದು, ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಬಿನಿ ಮತ್ತು ವರುಣಾ ನಾಲಾ ವೃತ್ತ ಅಧೀಕ್ಷಕರ ಸೂಚನೆ ನೀಡಿದ್ದಾರೆ.

ಕಬಿನಿ ಜಲಾಶಯ
author img

By

Published : Aug 8, 2019, 5:16 PM IST

ಮೈಸೂರು : ವಯನಾಡು ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯ ತುಂಬುವ ಹಂತಕ್ಕೆ ಬಂದಿದ್ದು, ಜಲಾಶಯದಿಂದ 80 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ.

ಕಬಿನಿ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, 80 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯ 2,284 ಗರಿಷ್ಠ ಮಟ್ಟ ಹೊಂದಿದ್ದು, ಸದ್ಯ 2281.53 ಅಡಿ ನೀರಿದೆ. ವಯನಾಡು ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಲಾಶಯಕ್ಕೆ 70 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನೀರಿನ ಪ್ರಮಾಣದಲ್ಲಿ ಭಾರೀ ಹೆಚ್ಚಳವಾಗಿದೆ.

ನಂಜನಗೂಡು - ಊಟಿ ಸಂಪರ್ಕ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಅದಕ್ಕೆ ಬದಲಿ ಮಾರ್ಗಕ್ಕಾಗಿ ಜಿಲ್ಲಾಡಳಿತ ಸಜ್ಜಾಗುತ್ತಿದೆ‌. ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರು ರಕ್ಷಣೆ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ಕಬಿನಿ ಮತ್ತು ವರುಣಾ ನಾಲಾ ವೃತ್ತ ಅಧೀಕ್ಷಕರು ಮುನ್ನೆಚ್ಚರಿಕೆ ನೀಡಿದ್ದಾರೆ.

Intro:ಕಬಿನಿBody:ಕಬಿನಿಯಿಂದ 60ಸಾವಿರ ಕ್ಯೂಸೆಕ್ ಹೊರಕ್ಕೆ ಮುಳುಗಲಿದೆ ಹಲವು ಗ್ರಾಮಗಳು
ಮೈಸೂರು: ವಯನಾಡು ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯ ತುಂಬುವ ಹಂತಕ್ಕೆ ಬಂದಿದ್ದು, ಜಲಾಶಯದಿಂದ 60 ಸಾವಿರ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ.
ಎಚ್‌.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ‌ ಜಲಾಶಯವು 2284 ಅಡಿ ಗರಿಷ್ಠ ಮಟ್ಟವಿದ್ದು,ಜಲಾಶಯದಲ್ಲಿ‌ 2281.53 ಅಡಿ ನೀರು ಇದ್ದು,ಜಲಾಶಯ ಮೂರು ಅಡಿ ಬಾಕಿ ಇರುವಂತೆ ನೀರನ್ನು ಹೊರ ಬಿಡಲಾಗುತ್ತಿದೆ‌. ವಯನಾಡು ಪ್ರದೇಶದಲ್ಲಿ ಭೀಕರ ಪ್ರಮಾಣದ ಮಳೆಯಾಗಿರುತ್ತಿರುವುದರಿಂದ 70ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.ನೀರಿನ ಪ್ರಮಾಣ ಹೆಚ್ಚಳವಾಗುತ್ತಿರುವುದರಿಂದ 80ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದಿಂದ ಹೊರ ಬಿಡಲಾಗುತ್ತಿದೆ.
ನಂಜನಗೂಡು -ಊಟಿ ಸಂಪರ್ಕ ಬೇಸಿಯುವ ಸೇತುವೆ ನೀರಿನಿಂದ ಮುಳುಗಡೆಯಾಗುವ ಸಾಧ್ಯತೆ ಹೆಚ್ಚಾಗಿದೆ.ಇದಕ್ಕೆ ಬದಲಿ ಮಾರ್ಗಕ್ಕಾಗಿ ಜಿಲ್ಲಾಡಳಿತ ಸಜ್ಜಾಗುತ್ತಿದೆ‌
ಕಬಿನಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಬಿನಿ ಮತ್ತು ವರುಣಾ ನಾಲಾ ವೃತ್ತ ಅಧೀಕ್ಷಕರ ಸೂಚನೆ ಮೆರೆಗೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Conclusion:ಕಬಿನಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.