ಮೈಸೂರು: ಕಾಂಗ್ರೆಸ್ನಲ್ಲಿ ಎಲ್ಲರ ನಡುವೆ ಸಾಮರಸ್ಯವಿದೆ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಸಿದ್ದರಾಮಯ್ಯ ಜೊತೆ ನಾವೆಲ್ಲಾ ಒಟ್ಟಾಗಿ ನಿಲ್ಲುತ್ತೇವೆ ಎಂದು ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ಹಲ್ಲೆಗೊಳಗಾದ ತನ್ವೀರ್ ಸೇಠ್ ಅವರ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಈ ಹಂತದಲ್ಲಿ ರಾಜಿ ಆಗದಂತೆ ತನಿಖೆ ಮಾಡಬೇಕೆಂದು ನಾನು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದಿದ್ದಾರೆ.
26ರ ನಂತರ ಹುಣಸೂರಿಗೆ ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ, ಹುಣಸೂರಿನಲ್ಲಿ ಈ ಹಿಂದೆ ಕಾಂಗ್ರೆಸ್ ಗೆದ್ದಿತ್ತು, ಈ ಬಾರಿಯೂ ಗೆಲ್ಲುತ್ತೇವೆ ಎಂದಿದ್ದಾರೆ. ಇನ್ನು ಕಾಂಗ್ರೆಸ್ ನಾಯಕರಲ್ಲಿ ಸಮನ್ವಯದ ಕೊರತೆ ಇದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ರೀತಿ ಏನು ಇಲ್ಲ. ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ, ಕಾಂಗ್ರೆಸ್ನಲ್ಲಿ ಎಲ್ಲರಿಗೂ ಸಾಮರಸ್ಯ ಇದೆ, ಇರುತ್ತದೆ ಎಂದಿದ್ದಾರೆ.
ಸಿದ್ದರಾಮಯ್ಯ ಜೊತೆ ಹಿರಿಯ ಕಾಂಗ್ರೆಸಿಗರು ಕೈ ಜೋಡಿಸುತ್ತಿಲ್ಲ ಅವರ ಜೊತೆ ನಿಲ್ಲುತ್ತಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲಾ ಸಮಯದಲ್ಲೂ ಅವರ ಜೊತೆ ನಿಲ್ಲುತ್ತೇವೆ. ಒಬ್ಬಂಟಿಯಾಗಿ ಎದುರಿಸಿ ಉತ್ತರ ಕೊಡುವ ಸಾಮರ್ಥ್ಯ ಸಿದ್ದರಾಮಯ್ಯ ಅವರಿಗೆ ಇದೆ, ಯಾವಾಗಲೂ ನಾವೆಲ್ಲಾ ಅವರ ಜೊತೆ ನಿಲ್ಲುತ್ತೇವೆ ಎಂದಿದ್ದಾರೆ.