ಮೈಸೂರು: ವಿದೇಶದ ಮೃಗಾಲಯವೊಂದರಲ್ಲಿ ಹುಲಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ದಸರಾಗೆ ಬರುವ ಆನೆಗಳಿಗೂ ಹಾಗೂ ಮಾವುತನಿಗೂ ಕೊರೊನಾ ಟೆಸ್ಟ್ ಮಾಡಿಸಲಾಗುವುದು ಎಂದು ಡಿಸಿಎಫ್ ಅಲೆಕ್ಸಾಂಡರ್ ತಿಳಿಸಿದ್ದಾರೆ.
ಸರಳ ದಸರಾದಲ್ಲಿ ಪಾಲ್ಗೊಳ್ಳುವ 5 ಆನೆಗಳನ್ನು ಕೊರೊನಾ ಸೋಂಕಿನಿಂದ ರಕ್ಷಿಸಲು ಅರಣ್ಯ ಇಲಾಖೆ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಆನೆ ಕ್ಯಾಂಪ್ನಿಂದ ಮೈಸೂರಿಗೆ ಬರುವ ಮುನ್ನ ಮಾವುತ, ಕಾವಾಡಿ ಹಾಗೂ ಅವರ ಕುಟುಂಬ ಸದಸ್ಯರಿಗೆ ಕೋವಿಡ್ ಟೆಸ್ಟ್ ಮಾಡಿಸಲು ತೀರ್ಮಾನಿಸಲಾಗದೆ. ಅಗತ್ಯ ಬಿದ್ದರೆ ಆನೆಗಳಿಗೂ ಟೆಸ್ಟ್ ನಡೆಸಲು ಇಲಾಖೆ ಉದ್ದೇಶಿಸಿದೆ. ಏಕೆಂದರೆ ಅಮೆರಿಕದ ಮೃಗಾಲಯದ ಹುಲಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಎಚ್ಚರ ವಹಿಸಲಾಗಿದೆ ಎಂದರು.
ಸರ್ಕಾರದ ಮಾರ್ಗಸೂಚಿಯಂತೆ ಮಾವುತ, ಕಾವಾಡಿ ಹಾಗೂ ಕುಟುಂಬ ಸದಸ್ಯರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗುತ್ತದೆ. ಎಲ್ಲಿಯೂ ಆನೆಗೆ ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ವರದಿಯಾಗಿಲ್ಲ. ಆದರೂ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳನ್ನು ಕೊರೊನಾ ಸೋಂಕಿನಿಂದ ರಕ್ಷಿಸಲು ಅಗತ್ಯ ಕ್ರಮಕೈಗೊಂಡಿದ್ದು, ತಜ್ಞರೊಂದಿಗೆ ಸಂಪರ್ಕದಲ್ಲಿದ್ದು, ಅಗತ್ಯ ಬಿದ್ದರೆ ಆನೆಗಳಿಗೂ ಟೆಸ್ಟ್ ಮಾಡಿಸುತ್ತೇವೆ ಎಂದು ಡಿಸಿಎಫ್ ಅಲೆಕ್ಸಾಂಡರ್ ತಿಳಿಸಿದ್ದಾರೆ.