ಮೈಸೂರು: ಲಾಕ್ಡೌನ್ ಆದೇಶ ಉಲ್ಲಂಘಿಸಿ ಅನಾವಶ್ಯಕವಾಗಿ ರಸ್ತೆಯಲ್ಲಿ ಓಡಾಡಿದರೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಬಿ.ಸಿ. ರಿಷ್ಯಂತ್ ತಿಳಿಸಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ 9 ಜಿಲ್ಲೆಗಳನ್ನು ಲಾಕ್ಡೌನ್ ಮಾಡಲಾಗಿದ್ದು, ಅದರಲ್ಲಿ ಜಿಲ್ಲೆಯೂ ಸಹ ಇದೆ. ಇದನ್ನು ಉಲ್ಲಂಘಿಸಿ ಅನವಶ್ಯಕವಾಗಿ ರಸ್ತೆಗಳಲ್ಲಿ ಜನ ಓಡಾಡಿದರೆ ಅಂತಹವರ ಮೇಲೆ ಐಪಿಸಿ ಸೆಕ್ಷನ್ 270 ಕೇಸ್ ಬುಕ್ ಮಾಡಲಾಗುತ್ತದೆ. ಕೇಸ್ ಹಾಕಿದ ನಂತರ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು.
ಈ ವಿಚಾರವನ್ನು ಗಂಭೀರವಾಗಿ ಹೇಳಿದ್ದರೂ ಜನ ಇದನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಇದು ಹೀಗೆ ಮುಂದುವರಿದರೆ 10 ಜನ ಜೈಲಿಗೆ ಹೋಗುವುದು ಗ್ಯಾರಂಟಿ. ಅವರಿಗೆ ಬೇಲ್ ಸಹ ಸಿಗುವುದಿಲ್ಲ ಎಂದು ಹೇಳಿದರು.