ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಸಚಿವ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.
ಹುಣಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹುಣಸೂರಿನಲ್ಲಿ ಜನಸಾಗರ ನೋಡಿದರೆ ನಮ್ಮ ಪಕ್ಷದ ಅಭ್ಯರ್ಥಿ ಹೆಚ್.ವಿಶ್ವನಾಥ್ ಅವರು ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ ಎಂಬ ವಿಶ್ವಾಸ ಇದೆ. ಹಿಂದುಳಿದ ನಾಯಕರಾಗಿ ವಿಶ್ವನಾಥ್ ಅವರು ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಜನರು ಅವರನ್ನು ಕೈ ಬಿಡುವುದಿಲ್ಲ ಎಂದರು.
ಇನ್ನು ರಾಜ್ಯದಲ್ಲಿ ನೆರೆ ಸಂಕಷ್ಟ ಎದುರಾದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನಪರವಾಗಿ ಕೆಲಸ ಮಾಡಿದ್ದಾರೆ. ಅವರು ಮಾಡಿರುವ ಕೆಲಸದಿಂದ ರಾಜ್ಯದಲ್ಲಿ ಮೂರೂವರೆ ವರ್ಷ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.