ETV Bharat / state

ಚುನಾವಣೆಯಲ್ಲಿ 6 ಸ್ಥಾನವನ್ನೂ ಗೆಲ್ಲುತ್ತೇವೆ: ಕಟೀಲ್ ವಿಶ್ವಾಸ

2 ಉಪ ಚುನಾವಣೆ ಹಾಗೂ 4 ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

author img

By

Published : Oct 15, 2020, 2:31 PM IST

Naleen Kumar Kateel
ಚುನಾವಣೆಯಲ್ಲಿ 6 ಸ್ಥಾನವನ್ನೂ ಗೆಲ್ಲುತ್ತೇವೆ: ನಳೀನ್ ಕುಮಾರ್ ಕಟೀಲ್ ವಿಶ್ವಾಸ

ಮೈಸೂರು: ಉಪ ಚುನಾವಣೆ ಹಾಗೂ ವಿಧಾನ ಪರಿಷತ್​ ಚುನಾವಣೆಯ 6 ಸ್ಥಾನಗಳಲ್ಲಿ 6 ಸ್ಥಾನವನ್ನೂ ಬಿಜೆಪಿ ಗೆಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ರಾಜ್ಯ ಬಿಜೆಪಿ ನೂತನ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ಬೇರು ಮಟ್ಟದಿಂದ ಕಟ್ಟಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 224 ಸ್ಥಾನಗಳನ್ನು ಗೆಲ್ಲಲು ಸಂಕಲ್ಪ ಯಾತ್ರೆ ಕೈಗೊಳ್ಳಲಾಗುವುದು. ಈಗ ಸವಾಲಿನ ಸಮಯವಾಗಿದೆ. ಒಂದು ಕಡೆ ಕೋವಿಡ್ ಸವಾಲಾದರೆ, ಮತ್ತೊಂದು ಕಡೆ ವಿಧಾನ ಪರಿಷತ್ ಮತ್ತು ಉಪ ಚುನಾವಣೆಯ ಸವಾಲು ಪಕ್ಷದ ಮುಂದೆ ಇದೆ. ಆದರೂ ಬಿಜೆಪಿ 2 ಉಪ ಚುನಾವಣೆ ಹಾಗೂ 4 ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಲಿದೆ ಎಂದರು.

ಕಾಂಗ್ರೆಸ್​ಗೆ ಡಿ.ಜೆ.ಹಳ್ಳಿ ಗಲಭೆಯಲ್ಲಿ ತಮ್ಮ ಶಾಸಕರ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಇನ್ನು ಚುನಾವಣೆ ಎದುರಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು, ಮುಂದಿನ ಪಂಚಾಯತ್​ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಪಕ್ಷವನ್ನು ಸಂಘಟನೆ ಮಾಡಲಾಗುವುದು ಎಂದರು.

ನೂತನ ಪದಾಧಿಕಾರಿಗಳ ಸಭೆ: ನೂತನವಾಗಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ಇಂದು ಖಾಸಗಿ ಹೋಟೆಲ್​ನಲ್ಲಿ ನಡೆಯಿತು. ಈ ಸಭೆಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕರು ಹಾಗೂ ಬಿಜೆಪಿಯಲ್ಲಿ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.