ETV Bharat / state

ವಾರಾಂತ್ಯ ಕರ್ಫ್ಯೂ ಉಲ್ಲಂಘನೆ: ಮೈಸೂರಲ್ಲಿ ಒಂದೇ ದಿನ 461 ಕೇಸ್​ ದಾಖಲು

author img

By

Published : Jan 9, 2022, 8:18 PM IST

Weekend curfew in Karnataka: ವಾರಾಂತ್ಯ ಕರ್ಫ್ಯೂ ನಿಯಮಗಳ ಜಾರಿ ಸಂಬಂಧ ಮೈಸೂರು ನಗರ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ನಿಯಮ ಉಲ್ಲಂಘಿಸಿರುವ ಹಿನ್ನೆಲೆ ಒಂದೇ ದಿನ ಬರೋಬ್ಬರಿ 461 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

weekend-curfew-violation-in-mysore
ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಮನವಿ

ಮೈಸೂರು: ವಾರಾಂತ್ಯ ಕರ್ಪ್ಯೂ ನಿಯಮಗಳನ್ನು ಉಲ್ಲಂಘನೆ ಮಾಡಿದವರ ವಿರುದ್ದ ನಗರ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಭಾನುವಾರ ಒಂದೇ ದಿನ ಬರೋಬ್ಬರಿ 461 ಪ್ರಕರಣಗಳನ್ನು ದಾಖಲಿಸಿಕೊಂಡು ಬಿಸಿ ಮುಟ್ಟಿಸಿದ್ದಾರೆ.

ಅನಾವಶ್ಯಕವಾಗಿ ಸಂಚರಿಸುತ್ತಿದ್ದ 2 ವಾಹನಗಳನ್ನು ವಶಪಡಿಸಿಕೊಂಡಿದ್ದು, ಮಾಸ್ಕ್ ಧರಿಸದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದವರ ವಿರುದ್ದ 461 ಪ್ರಕರಣ ದಾಖಲಿಸಿ 80,750 ರೂ. ದಂಡ ವಿಧಿಸಿದ್ದಾರೆ.

ಜತೆಗೆ ಕರ್ಫ್ಯೂ ನಿಯಮ ಉಲ್ಲಂಘಿಸಿ, ವ್ಯಾಪಾರ ವಹಿವಾಟು ನಡೆಸಿದ ಎಂಟು ಮಂದಿ ವ್ಯಾಪಾರಸ್ಥರ ವಿರುದ್ದ ಪ್ರಕರಣ ದಾಖಲಿಸಲಾಗಿದೆ. ವಿವಿಧ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲಿ ಹೋಟೆಲ್‌, ಗುಜರಿ ಅಂಗಡಿ, ಕಬ್ಬಿಣ ಮತ್ತು ಹಾರ್ಡ್‌ವೇರ್, ಚಿಲ್ಲರೆ ಅಂಗಡಿ ವ್ಯಾಪಾರಸ್ಥರ ವಿರುದ್ಧ ಪ್ರಕರಣಗಳನ್ನು ದಾಖಲಾಗಿವೆ.

ವಾರಾಂತ್ಯ ಕರ್ಪ್ಯೂ ನಿಯಮಗಳ ಜಾರಿ ಸಂಬಂಧ ಮೈಸೂರು ನಗರ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಸಾರ್ವಜನಿಕರು ಕೋವಿಡ್-19 ನಿಯಮಗಳನ್ನು ಪಾಲಿಸುವ ಮೂಲಕ ಕೋವಿಡ್​-19 ಹರಡುವಿಕೆ ತಡೆಗಟ್ಟಲು ಪೊಲೀಸರಿಗೆ ಜನ ಸಹಕಾರ ನೀಡಬೇಕು ಎಂದು ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ ಮನವಿ ಮಾಡಿದ್ದಾರೆ.

ಓದಿ: ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಕೆಎಎಸ್ ಅಧಿಕಾರಿ ಪುತ್ರಿಗೆ ಪ್ರತ್ಯೇಕ ಕೊಠಡಿ ನೀಡಿದ ಆರೋಪ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.