ಮೈಸೂರು : ಪುಷ್ಪಾರ್ಚನೆ ಮಾಡುವ ಮೂಲಕ ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ಮಹಾದ್ವಾರದಲ್ಲಿ ದಸರಾ ಗಜಪಡೆಯನ್ನು ಸಚಿವ ಎಸ್.ಟಿ.ಸೋಮಶೇಖರ್ ಸಾಂಪ್ರದಾಯಿಕವಾಗಿ ಅರಮನೆಗೆ ಬರಮಾಡಿಕೊಂಡರು.
ಕಾಡಿನಿಂದ ಬಂದ ಗಜಪಡೆಯನ್ನು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಬರಮಾಡಿಕೊಳ್ಳಲಾಯಿತು. ಇದಕ್ಕೂ ಮುನ್ನ ಪೊಲೀಸ್ ಇಲಾಖೆಯಿಂದ ಜಯಮಾರ್ತಾಂಡ ದ್ವಾರದಲ್ಲಿ ಗಜಪಡೆಗಳಿಗೆ ಗಾಡ್ ಆಫ್ ಹಾನರ್ ಸಲ್ಲಿಸಲಾಯಿತು. ಅಲ್ಲಿಂದ ಮಧ್ಯಾಹ್ನ 12.40 ರ ಸುಮಾರಿಗೆ ನಾದಸ್ವರ ಹಾಗೂ ಪೂರ್ಣಕುಂಬದ ಮೂಲಕ ಅರಮನೆಯ ಆನೆ ಬಾಗಿಲಿಗೆ ಗಜಪಡೆಯನ್ನು ಮೆರವಣಿಗೆ ಮೂಲಕ ಕರೆತರಲಾಯಿತು. ಈ ವೇಳೆ 5 ಆನೆಗಳಿಗೆ ಪುಷ್ಪಾರ್ಚನೆ ಮಾಡಲಾಯಿತು.
ಬಳಿಕ, ಜಿಲ್ಲೆಯ ಪ್ರಮುಖ ಅಧಿಕಾರಿಗಳಿಗೆ ಫಲ ತಾಂಬೂಲ ವಿತರಿಸಿದ ಸಚಿವ ಸೋಮಶೇಖರ್,ದಸರಾ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಬೇಕೆಂದು ಸೂಚಿಸಿದರು. ಇದೇ ವೇಳೆ ಮಾವುತರು ಮತ್ತು ಕಾವಾಡಿಗಳಿಗೆ ಅಗತ್ಯ ಸಾಮಗ್ರಿಗಳನ್ನು ವಿತರಿಸಲಾಯಿತು.