ಮೈಸೂರು: ರಾಜ್ಯಮಟ್ಟದ ವಿಶೇಷಚೇತನರ ಬಾಸ್ಕೆಟ್ ಬಾಲ್ ಚಾಂಪಿಯನ್ ಸ್ಫರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಬೆಳಗಾವಿ ಹಾಗೂ ಮಹಿಳೆಯರ ವಿಭಾಗದಲ್ಲಿ ಬೆಳಗಾವಿ 'ಎ' ತಂಡಗಳು ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿವೆ.
ವ್ಹೀಲ್ ಚೇರ್ ಬಾಸ್ಕೆಟ್ ಬಾಲ್ ಫೆಡರೇಷನ್ ಆಫ್ ಇಂಡಿಯಾ ಸಹಯೋಗದೊಂದಿಗೆ ಜೆಎಸ್ಎಸ್ ವಿಶೇಷಚೇತನರ ಪಾಲಿಟೆಕ್ನಿಕ್ ವತಿಯಿಂದ ಎಸ್ಜೆಸಿಇ ಕಾಲೇಜಿನ ಸ್ಫೋಟ್ಸ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪುರುಷರ ವಿಭಾಗದಲ್ಲಿ ಬೆಳಗಾವಿ ತಂಡ ಬೆಂಗಳೂರು ತಂಡವನ್ನು ಮಣಿಸಿ ಚಾಂಪಿಯನ್ ಆದರೆ ಬೆಂಗಳೂರು ತಂಡ ರನ್ನರ್ ಅಪ್ ಗೆ ತೃಪ್ತಿಪಟ್ಟುಕೊಂಡಿತು. ಮೈಸೂರು ತಂಡ ಮೂರನೇ ಸ್ಥಾನ ಅಲಂಕರಿಸಿದೆ.
ಮಹಿಳೆಯರ ವಿಭಾಗದಲ್ಲಿ ಬೆಳಗಾವಿ 'ಎ'ತಂಡ, ಚಾಂಪಿಯನ್ ಪಟ್ಟ ಅಲಂಕರಿಸಿತು. ಮೈಸೂರು ತೃತೀಯ ಸ್ಥಾನ ಗಳಿಸಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಪುರುಷ ಹಾಗೂ ಮಹಿಳೆಯರು ಸೇರಿ 30 ತಂಡಗಳು ವ್ಹೀಲ್ ಚೇರ್ ಬ್ಯಾಸ್ಟ್ಕೆಟ್ ಬಾಲ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.