ಮೈಸೂರು: ಮೈಸೂರು ಜಿಲ್ಲೆಯಷ್ಟೇ ಅಲ್ಲ, ರಾಜ್ಯದ ಯಾವ ಜಿಲ್ಲೆಯಲ್ಲೂ ಲಾಕ್‌ಡೌನ್ ಮಾಡುವುದಿಲ್ಲ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ ನೀಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಯಾವುದೇ ಜಿಲ್ಲೆಯನ್ನು ಮುಂದಿನ ದಿನಗಳಲ್ಲಿ ಲಾಕ್‌ಡೌನ್ ಮಾಡುವುದಿಲ್ಲವೆಂದು ಹೇಳಿದರು.
ಎನ್.ಆರ್.ಕ್ಷೇತ್ರ, ಚಾಮುಂಡೇಶ್ವರಿ, ಚಾಮರಾಜ ಹಾಗೂ ಕೆ.ಆರ್.ಕ್ಷೇತ್ರಗಳಿಗೆ ಕೊರೊನಾ ಸೋಂಕಿತರ ಸಂಖ್ಯೆ ಜಾಸ್ತಿಯಾಗುತ್ತಿರುವುದರಿಂದ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ವಿಶೇಷವಾಗಿ ಎನ್.ಆರ್.ಕ್ಷೇತ್ರಕ್ಕೆ ಹೆಚ್ಚಿನ ನಿಗಾ ಇಡಲಾಗುವುದು ಎಂದು ಅವರು ತಿಳಿಸಿದರು.