ETV Bharat / state

ಮೈಸೂರು: ಕಾಡು ಪ್ರಾಣಿಗಳ ಹಾವಳಿಗೆ ತುತ್ತಾಗುತ್ತಿರುವ ರೈತರ ಬೆಳೆಗಳು - Attack of wild animals to villages in the wild

ಅಭಿವೃದ್ಧಿ ನೆಪದಲ್ಲಿ ಕಾಡುಗಳನ್ನು ಸಂಪೂರ್ಣ ಒತ್ತುವರಿ ಮಾಡಿಕೊಳ್ಳುತ್ತಿರುವ ಸಲುವಾಗಿ ಮಾನವ ಮತ್ತು ಕಾಡು ಪ್ರಾಣಿಗಳ ನಡುವೆ ಸಂಘರ್ಷ ಏರ್ಪಡುತ್ತಿದೆ. ಹೀಗಾಗಿ ಅದರ ತಡೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ.

Elephant
ಆನೆ
author img

By

Published : Dec 4, 2020, 11:00 PM IST

ಮೈಸೂರು: ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿಗಳಿಂದ ಬೆಳೆ ಹಾನಿ ನಿರಂತರವಾಗಿ ಸಾಗುತ್ತಿದ್ದು, ತಡೆಗಟ್ಟಲು ನಡೆಸಿರುವ ಪ್ರಯತ್ನಗಳು ಫಲ ಕೊಟ್ಟಿಲ್ಲ.

ಜಿಲ್ಲೆಯಲ್ಲಿ ನಾಗರಹೊಳೆ ಹಾಗೂ ಬಂಡೀಪುರ ಅರಣ್ಯ ಪ್ರದೇಶಗಳಿದ್ದು, ಹೆಚ್.ಡಿ.ಕೋಟೆ, ಸರಗೂರು, ನಂಜನಗೂಡು ತಾಲೂಕುಗಳ ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಹೀಗಾಗಿ ರೈತರು ಬೆಳೆದ ಬೆಳೆಗಳ ಜೊತೆಗೆ ಸಾಕು ಪ್ರಾಣಿಗಳು ನಾಶವಾಗುತ್ತಿವೆ.

ಕಾಡು ಪ್ರಾಣಿಗಳ ಹಾವಳಿ ಕುರಿತು ಪರಿಸರ ಹೋರಾಟಗಾರ್ತಿ ಅಭಿಪ್ರಾಯ

ಜನಸಂಖ್ಯೆ ಹೆಚ್ಚಳ ಮತ್ತು ಅಭಿವೃದ್ಧಿ ನೆಪದಲ್ಲಿ ಕಾಡುಗಳ ಒತ್ತುವರಿ ಅಧಿಕ ಪ್ರಮಾಣದಲ್ಲಿದ್ದು, ಆಹಾರ ಅರಸಿ ಕಾಡು ಪ್ರಾಣಿಗಳು ನಾಡುಗಳತ್ತ ಬರುತ್ತಿವೆ. ಈ ವೇಳೆ ಪ್ರಾಣಿಗಳು ಮತ್ತು ಮಾನವನ ನಡುವೆ ಸಂಘರ್ಷ ಏರ್ಪಡುತ್ತಿದ್ದು, ಎಷ್ಟೋ ಪ್ರಾಣಿಗಳು ಮತ್ತು ಮನುಷ್ಯರು ಬಲಿಯಾಗಿದ್ದಾರೆ ಎನ್ನುತ್ತಾರೆ ಪರಿಸರ ಹೋರಾಟಗಾರ್ತಿ ಭಾನು ಮೋಹನ್.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.