ETV Bharat / state

ಮೈಸೂರಿನಲ್ಲಿ ಕಾಡಾನೆ ದಾಳಿಗೆ ಕಾವಲುಗಾರ ಸಾವು - HD Kote Public Hospital

ಅರಣ್ಯ ಇಲಾಖೆ ಕಾವಲುಗಾರರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಮೈಸೂರಿನಲ್ಲಿ ನಡೆದಿದೆ.

Watchman Mahadevaswamy who died in a wild elephant attack
ಕಾಡಾನೆ ದಾಳಿಗೆ ಬಲಿಯಾದ ಕಾವಲುಗಾರ ಮಹದೇವಸ್ವಾಮಿ
author img

By

Published : Jan 1, 2023, 11:03 AM IST

Updated : Jan 1, 2023, 11:45 AM IST

ಮೈಸೂರು: ತಡರಾತ್ರಿ ಕಾಡಾನೆ ದಾಳಿಗೆ ಅರಣ್ಯ ಇಲಾಖೆಯ ಕಾವಲುಗಾರ ಮೃತಪಟ್ಟಿದ್ದಾರೆ. ಇದೇ ವೇಳೆ ಮತ್ತೊಬ್ಬರು ಪಾರಾಗಿದ್ದಾರೆ. ಮಹದೇವಸ್ವಾಮಿ (36) ಮೃತಪಟ್ಟವರು. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಮೇಟಿಕುಪ್ಪೆ ಅರಣ್ಯ ಪ್ರದೇಶದ ಸೊಳ್ಳಾಪುರ ಬಳಿ ಶನಿವಾರ ಘಟನೆ ನಡೆದಿದೆ.

ಸುಮಾರು ಹತ್ತು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಹಂಗಾಮಿ ವಾಚರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹದೇವಸ್ವಾಮಿ ತಡರಾತ್ರಿ ಕಾವಲಿನಲ್ಲಿದ್ದಾಗ ಕಾಡಾನೆ ಇವರ ಮೇಲೆ ದಾಳಿ ನಡೆಸಿತು. ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಮಹದೇವಸ್ವಾಮಿ ಮೃತಪಟ್ಟರು. ಹಾಗೆಯೇ
ಸ್ಥಳದಲ್ಲಿದ್ದ ಮತ್ತೊಬ್ಬ ವಾಚರ್ ರಾಜೇಶ ಆಶ್ಚರ್ಯಕರ ರೀತಿಯಲ್ಲಿ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಮಹದೇವಸ್ವಾಮಿ ಮೃತದೇಹವನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆ ಆವರಣದ ಮುಂಭಾಗದಲ್ಲಿ ಕುಟುಂಬದವರ ಆಕ್ರಂದನ ಮನಕಲಕುವಂತಿತ್ತು.

ಅತಿಯಾಗುತ್ತಿರುವ ಕಾಡಾನೆ ದಾಳಿ: ಇತ್ತೀಚೆಗೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು ರೈತರು ಬೇಸತ್ತು ಹೋಗಿದ್ದಾರೆ. ಅರಣ್ಯ ಇಲಾಖೆ ತಮ್ಮಿಂದಾಗುವ ಎಲ್ಲ ಪ್ರಯತ್ನವನ್ನೂ ಮಾಡುತ್ತಿದ್ದರೂ ಕೆಲವೊಮ್ಮೆ ದಾಳಿಯಿಂದ ಊರ ಜನರು ಸಾವಿಗೀಡಾಗಿರುವ ಉದಾಹರಣೆಯೂ ಇದೆ. ನಿನ್ನೆಯಷ್ಟೆ ಮೈಸೂರಿನಲ್ಲಿ ಮೂವರನ್ನು ಬಲಿ ಪಡೆದಿದ್ದ ಒಂಟಿ ಸಲಗವನ್ನು ಅರಣ್ಯಾಧಿಕಾರಿಗಳು ಆಪರೇಶನ್​ ಎಲಿಫೆಂಟ್​ ಖ್ಯಾತಿಯ ಆನೆಗಳಿಂದ ಅರವಳಿಕೆ ಮದ್ದು ನೀಡುವ ಮೂಲಕ ಸೆರೆ ಹಿಡಿದಿದ್ದರು.

ಇದನ್ನೂ ಓದಿ: ಕಾಡು ಪ್ರಾಣಿ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ₹15 ಲಕ್ಷ ಪರಿಹಾರ: ಸಚಿವ ಅಶೋಕ್

ಆನೆ ದಾಳಿಯಿಂದ ಬೇಸತ್ತ ಜನರು ಸರ್ಕಾರ, ಜನಪ್ರತಿನಿಧಿಗಳ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಕಾಡಾನೆಗಳನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಜೊತೆ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಆನೆ-ಮಾನವ ಸಂಘರ್ಷಕ್ಕೆ ಸಂಬಂಧಿಸಿ ನೀಡಲಾಗುತ್ತಿರುವ ಪರಿಹಾರವನ್ನು ದ್ವಿಗುಣಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

ಈ ಸೂಚನೆಯಂತೆ ಮಾನವ ಜೀವ ಹಾನಿಗೆ ನೀಡುತ್ತಿದ್ದ ಪರಿಹಾರ ಮೊತ್ತವನ್ನು 7.5 ಲಕ್ಷ ರೂ ಗಳಿಂದ 15 ಲಕ್ಷ ರೂ. ಗಳಿಗೆ ಏರಿಕೆ, ಶಾಶ್ವತ ಅಂಗವಿಕಲತೆಗೆ ನೀಡುವ ಪರಿಹಾರ 5 ಲಕ್ಷ ರೂ, ಉಳಿದ ಭಾಗಶಃ ಅಂಗವಿಕಲರಿಗೆ, ಗಾಯಗೊಂಡವರಿಗೆ, ಜೀವ ಹಾನಿ ಅಥವಾ ಶಾಶ್ವತ ಅಂಗವಿಕಲತೆಯ ಪ್ರಕರಣಗಳಿಗೆ ನೀಡುವ ಕುಟುಂಬ ಮಾಸಾಶನದ ಪರಿಹಾರ ಮೊತ್ತವನ್ನು ಸರ್ಕಾರ ಹೆಚ್ಚಿಸಿದೆ.

ಇತ್ತೀಚೆಗೆ ಬೆಳಗಾವಿ ಅಧಿವೇಶನದ ಸಂದರ್ಭ, ವಿಧಾನಸಭೆ ಪ್ರಶ್ನೋತ್ತರ ಕಲಾಪದಲ್ಲಿ ಕಾಡು ಪ್ರಾಣಿಯ ದಾಳಿಯಿಂದ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ರೂಪಾಯಿ ಪರಿಹಾರವನ್ನು ತುರ್ತಾಗಿ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್​. ಅಶೋಕ್​ ತಿಳಿಸಿದ್ದರು. ಅಲ್ಲದೇ ಕಾಡು ಪ್ರಾಣಿಗಳು ಗ್ರಾಮಗಳಿಗೆ ಬರದಂತೆ ಯಾವುದೆಲ್ಲ ಕ್ರಮ ತೆಗೆದುಕೊಳ್ಳಬೇಕೋ ಅದೆಲ್ಲವನ್ನೂ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಕಾಡಾನೆ ದಾಳಿ ಪ್ರಕರಣ.. ಮೂವರನ್ನು ಬಲಿ ಪಡೆದಿದ್ದ ವಕ್ರದಂತನ ಸೆರೆಯ ರೋಚಕ ಕಾರ್ಯಾಚರಣೆ

Last Updated : Jan 1, 2023, 11:45 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.