ಮೈಸೂರು: ಅಹಾರ ಅರಸಿ ಬಂದ ಕಾಡಾನೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಮೊಳೆಯೂರು ವಲಯ ಅರಣ್ಯ ವ್ಯಾಪ್ತಿಯ ಹೀರೆಹಳ್ಳಿಯ ಗ್ರಾಮದ ಬಳಿಯ ಜಮೀನಿನಲ್ಲಿ ನಡೆದಿದೆ. ಮೊಳೆಯೂರು ಅರಣ್ಯ ಪ್ರದೇಶದಿಂದ ಆಹಾರ ಅರಸಿ ನಾಡಿನತ್ತ ಮುಖ ಮಾಡಿದ್ದ 25 ವರ್ಷದ ಗಂಡಾನೆ ಬೆಳೆ ರಕ್ಷಣೆಗೆ ಹಾಕಿದ್ದ ವಿದ್ಯುತ್ ಬೇಲಿ ತಗುಲಿ ಮೃತಪಟ್ಟಿದೆ.
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹೆಡಿಯಾಲ ಉಪ ವಿಭಾಗದ ಮೊಳೆಯೂರು ಅರಣ್ಯ ವ್ಯಾಪ್ತಿಯಲ್ಲಿ ಹೆಚ್.ವಿ ನಾಗರಾಜು, ಹೆಚ್.ವಿ.ರಾಜಪ್ಪ ಎಂಬುವವರು ತಮ್ಮ ಜಮೀನಿನಲ್ಲಿ ಮುಸುಕಿನ ಜೋಳದ ರಕ್ಷಣೆಗಾಗಿ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿದ್ದರೆಂದು ತಿಳಿದುಬಂದಿದೆ.
ಇದನ್ನೂ ಓದಿ: ಸೈಕ್ಲೊಥಾನ್‌ನಲ್ಲಿ ಭಾಗಿಯಾದ ಮಹಿಳೆಯರಿಗೆ ಕಾಟ ನೀಡಿದ್ದ ಕಾಮುಕ ಡೆಲಿವರಿ ಬಾಯ್ ಅರೆಸ್ಟ್
ಸಿಎಫ್ ರಮೇಶ್ ಕುಮಾರ್, ಎಸಿಎಫ್ ಪರಮೇಶ್ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಆನೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.