ETV Bharat / state

ವಿನಮ್ರತೆಯಿಂದ ಪ್ರಶಸ್ತಿ ತಿರಸ್ಕಾರ.. ಕನ್ನಡದ ಕಲ್ಯಾಣಕ್ಕಾಗಿ ಪ್ರತಿಫಲದ ನಿರೀಕ್ಷೆಯಿಲ್ಲದೇ ಶ್ರಮಿಸುತ್ತೇನೆ:  ಯದುವೀರ್ ಒಡೆಯರ್ - UAE Kannada community

"ನನಗೆ ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂಬ ಸುದ್ದಿ ಮುದ್ರಣ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನಾನು ಈ ಪ್ರಶಸ್ತಿಯನ್ನು ಸ್ವೀಕರಿಸುವುದಿಲ್ಲ"

Will work for Kannada welfare without expectation of reward: Raja Yaduvir Wodeyar
ಕನ್ನಡ ಕಲ್ಯಾಣಕ್ಕಾಗಿ ಪ್ರತಿಫಲದ ನಿರೀಕ್ಷೆಯಿಲ್ಲದೆ ಶ್ರಮಿಸುತ್ತೇನೆ: ರಾಜ ಯದುವೀರ್ ಒಡೆಯರ್
author img

By

Published : Nov 11, 2022, 6:21 PM IST

ಮೈಸೂರು: ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಯು ಎ ಇ ಕನ್ನಡ ಸಮುದಾಯ ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ ನೀಡುವುದಾಗಿ ತಿಳಿಸಿದ್ದು, ಅದನ್ನು ವಿನಮ್ರವಾಗಿ ಒಡೆಯರು ತಿರಸ್ಕರಿಸಿದ್ದಾರೆ.

"ನನಗೆ ಅಂತರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂಬ ಸುದ್ದಿ ಮುದ್ರಣ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನಾನು ಈ ಪ್ರಶಸ್ತಿಯನ್ನು ಸ್ವೀಕರಿಸುವುದಿಲ್ಲ" ಎಂದು ಎಲ್ಲರಿಗೂ ತಿಳಿಸಲು ಬಯಸುತ್ತೇನೆ. ಹಾಗೆ ಈ ಗೌರವವನ್ನು ಸ್ವೀಕರಿಸಲು ನಾನು ಯೋಗ್ಯ ಎಂದು ಪರಿಗಣಿಸಿದ್ದಕ್ಕಾಗಿ ನಾನು ಸಂಘಟಕರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ, ಆದರೆ ಈ ಸಮಯದಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸುವುದು ನನಗೆ ಸೂಕ್ತವೆಂದೆನಿಸುತ್ತಿಲ್ಲ ಎಂದು ಹೇಳಿದ್ದಾರೆ.

ನಮ್ಮ ರಾಜ್ಯ ಮತ್ತು ನಮ್ಮ ಕನ್ನಡ ಸಮುದಾಯದ ಕಲ್ಯಾಣಕ್ಕಾಗಿ ನಾನು ಯಾವಾಗಲೂ ಶ್ರಮಿಸುತ್ತೇನೆ ಮತ್ತು ಆ ಬದ್ಧತೆಯು ಪ್ರತಿಫಲದ ನಿರೀಕ್ಷೆಯಿಲ್ಲದೆ ಇರುತ್ತದೆ. ನಾನು ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದೇನೆ ಮತ್ತು U.A.E ಯಲ್ಲಿರುವ ನಮ್ಮ ಕನ್ನಡ ಸಮುದಾಯವನ್ನು ಭೇಟಿ ಮಾಡಲು ಎದುರು ನೋಡುತ್ತಿದ್ದೇನೆ ಎಂದು ರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಪ್ರತಿಯೊಬ್ಬ ನಾಗರೀಕನು ರೈತನಾಗಬೇಕು: ಯದುವೀರ್ ಒಡೆಯರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.