ETV Bharat / state

ಕೊರೊನಾದಿಂದ ಮಹಿಳೆ ಸಾವು: ಹೆಡಿಯಾಲ ಗ್ರಾಮ ಸೀಲ್​ಡೌನ್ - Mysore corona Updates

3 ದಿನಗಳ ಹಿಂದೆ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದ್ದ ಸೋಂಕಿತ ಮಹಿಳೆ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

corona virus
ಕೊರೊನಾ ಸೋಂಕು
author img

By

Published : Jul 18, 2020, 1:51 PM IST

ಮೈಸೂರು: ಕೊರೊನಾ ಸೋಂಕಿನಿಂದ ಮಹಿಳೆ ಸಾವನ್ನಪ್ಪಿದ್ದು, ಸೋಂಕಿತೆ ವಾಸವಿದ್ದ ಗ್ರಾಮವನ್ನ ಸೀಲ್​ಡೌನ್ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ನಡೆದಿದೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹಾಗೂ ಸಾವಿನ ಸಂಖ್ಯೆಗಳು ಹೆಚ್ಚಾಗುತ್ತಿದ್ದು, ಈಗ ಗ್ರಾಮಾಂತರ ಪ್ರದೇಶಗಳಲ್ಲೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದ ಮಹಿಳೆಯೊಬ್ಬರು ತಮ್ಮ ಸಂಬಂಧಿಕರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ ಎಂದು ಅವರನ್ನು ನೋಡಲು ಹೋಗಿದ್ದರು. ಅವರು ಹೋಗಿ ಬಂದ ನಂತರ ಈ ಮಹಿಳೆಗೆ ಕೊರೊನಾ ಇರುವುದು ದೃಢಪಟ್ಟಿದ್ದು, 3 ದಿನಗಳ ಹಿಂದೆ ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿತ್ತು.

ಆದರೆ ಇಂದು ಬೆಳಗ್ಗೆ ಮಹಿಳೆ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಈಕೆ ವಾಸವಿದ್ದ ಹೆಡಿಯಾಲ ಗ್ರಾಮವನ್ನು ಸ್ಯಾನಿಟೈಸ್ ಮಾಡಿ ಸೀಲ್​ಡೌನ್ ಮಾಡಲಾಗಿದೆ ಎಂದು ನಂಜನಗೂಡು ತಹಶೀಲ್ದಾರ್ ಮಹೇಶ್ ಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.