ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು, ತನ್ನ ಗಂಡನೇ ನನ್ನ ಸಾವಿಗೆ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಗೃಹಿಣಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ತೆರಣಿಮುಂಟಿ ಗ್ರಾಮದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲೂಕಿನ ತೆರಣಿಮುಂಟಿ ಗ್ರಾಮದ ಗೃಹಿಣಿ ಪವಿತ್ರ ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಇವರು ಎರಡು ವರ್ಷಗಳ ಹಿಂದೆ ಶಂಕರ್ ಎನ್ನುವವರನ್ನು ವಿವಾಹವಾಗಿದ್ದರು. ಮದ್ಯ ವ್ಯಸನಿಯಾಗಿದ್ದ ಆಕೆಯ ಪತಿ ಶಂಕರ್ ನಿತ್ಯ ಕುಡಿದು ಮನೆಗೆ ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದನಂತೆ.
ಇದನ್ನೂ ಓದಿ : ತನಗೆ ಸಹಕರಿಸುತ್ತಿಲ್ಲ ಎಂದು ಹೆಂಡತಿಯನ್ನೇ ಕೊಂದು ಮಚ್ಚಿನ ಸಮೇತ ಪೊಲೀಸರಿಗೆ ಶರಣಾದ ಗಂಡ
ಈ ಕುರಿತು ಹೆಂಡತಿ ಎಷ್ಟೇ ಬುದ್ದಿ ಹೇಳಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತಿದ್ದ ಪವಿತ್ರ ಗುರುವಾರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ, ನನ್ನ ಸಾವಿಗೆ ನನ್ನ ಗಂಡನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಈ ಸಂಬಂಧ ಸರಗೂರು ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಡೆತ್ ನೋಟ್ ಆಧಾರದ ಮೇಲೆ ಪತಿ ಶಂಕರ್ನನ್ನು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.