ETV Bharat / state

ಮಹಿಳೆ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಪ್ರಕರಣ ಭೇದಿಸಿದ ಮಂಡ್ಯ ಪೊಲೀಸರು‌

ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ ಮಹಿಳೆಯೊಬ್ಬರನ್ನು ಅವರ ಮನೆಯಲ್ಲಿಯೇ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಬೆನ್ನಟ್ಟಿದ ಕಿಕ್ಕೇರಿ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Mandya
ಬಂಧಿತ ಆರೋಪಿ
author img

By

Published : Jun 18, 2022, 2:09 PM IST

ಮಂಡ್ಯ: ಹಾಡಹಗಲೇ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ರವಿಕುಮಾರ್(29) ಬಂಧಿತ ಆರೋಪಿ. ಪುಷ್ಪಲತಾ ಕೊಲೆಯಾದ ಮಹಿಳೆ.

ಪ್ರಕರಣದ ವಿವರ: ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದಲ್ಲಿ ಮೆಡಿಕಲ್ ಶಾಪ್ ನಡೆಸುತ್ತಿದ್ದ ಮಹಿಳೆಯೊಬ್ಬರನ್ನು ಅವರ ಮನೆಯಲ್ಲಿಯೇ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಬೆನ್ನಟ್ಟಿದ ಕಿಕ್ಕೇರಿ ಪೊಲೀಸ್ ಠಾಣೆ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಮಹಿಳೆ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಪ್ರಕರಣ ಭೇದಿಸಿದ ಮಂಡ್ಯ ಪೊಲೀಸರು‌

ಆರೋಪಿ ರವಿಕುಮಾರ್ ಪುಷ್ಪಲತಾ ಅವರ ಮನೆಯಲ್ಲಿ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದನಂತೆ. ಆದರೆ, ಇತ್ತೀಚೆಗೆ ಹಣಕಾಸಿನ ವಿಚಾರದಲ್ಲಿ ಇವರ ನಡುವೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ. ಇದರಿಂದ ಕೋಪಗೊಂಡ ರವಿಕುಮಾರ್ ಪುಷ್ಪಲತಾ ಅವರು ಮನೆಯಲ್ಲಿ ಒಬ್ಬಳೇ ಇರುವುದನ್ನು ಗಮನಿಸಿ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದ ಎನ್ನಲಾಗಿದೆ.

ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆಗೆ ಎಸ್​ಪಿ ಯತೀಶ್ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಟ್ರೈನ್​​​ನಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ, ಚಿಕಿತ್ಸೆ ದೊರೆಯದೇ ವ್ಯಕ್ತಿ ಮೃತ.. ಒಂದೇ ರೈಲಿನಲ್ಲಿ ನಡೀತು ಹುಟ್ಟು-ಸಾವು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.