ಮೈಸೂರು: ಕ್ಷುಲ್ಲಕ ಕಾರಣಕ್ಕೆ ಅಕ್ಕ-ಪಕ್ಕದವರ ಮಧ್ಯೆ ಉಂಟಾದ ಜಗಳ ಓರ್ವ ಮಹಿಳೆಯ ಕೊಲೆಯಲ್ಲಿ ಅಂತ್ಯವಾಗಿದೆ. ಮತ್ತೋರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ.
ಗಿರೀಶ್ ಎಂಬಾತ ಭಾರತಿ, ಸವಿತಾ ಇವರಿಬ್ಬರ ಜೊತೆ ಕಳೆದ 15 ದಿನಗಳಿಂದ ಜಗಳ ಮಾಡುತ್ತಿದ್ದ. ಬುಧವಾರ ಗಿರೀಶನು ಭಾರತಿ ಮತ್ತು ಸವಿತಾ ಮೇಲೆ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ ಎನ್ನಲಾಗ್ತಿದೆ.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಹಲ್ಲೆ ಪರಿಣಾಮ ಸವಿತಾ ಸ್ಥಳದಲ್ಲೇ ಮೃತಪಟ್ಟಿದ್ದರೆ, ಭಾರತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆ ಆರೋಪಿ ಗಿರೀಶ್ ಸ್ಥಳದಿಂದ ಪರಾರಿಯಾಗಿದ್ದಾನೆ.
ಓದಿ: ವಿವಿಧ ಯೋಜನೆಗಳಿಗೆ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ಉನ್ನತ ಮಟ್ಟದ ಸಮಿತಿ ರಚನೆಗೆ ತೀರ್ಮಾನ..