ETV Bharat / state

ಸಮನ್ವಯದಿಂದ ಕಾರ್ಯನಿರ್ವಹಿಸಿ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಿ: ಸಿಎಂ ಬಿಎಸ್​ವೈ - mysore latest news

ಜಿಲ್ಲೆಯ ಹಲವು ಸ್ಥಳಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ಜಿಲ್ಲೆಯ ಅಧಿಕಾರಿಗಳು, ಶಾಸಕರು ಹಾಗೂ ಸಂಸದರು ಉತ್ತಮ ಬಾಂಧವ್ಯದಿಂದ ಚುರುಕಾಗಿ ಕರ್ತವ್ಯ ನಿರ್ವಹಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿ ತಿಳಿಸಿದ್ದಾರೆ.

ಸಮನ್ವಯದಿಂದ ಕಾರ್ಯನಿರ್ವಹಿಸಿ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಿ: ಬಿಎಸ್​ವೈ
author img

By

Published : Aug 12, 2019, 10:54 PM IST

ಮೈಸೂರು: ಜಿಲ್ಲೆಯ ಹಲವು ಸ್ಥಳಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ಜಿಲ್ಲೆಯ ಅಧಿಕಾರಿಗಳು, ಶಾಸಕರು ಹಾಗೂ ಸಂಸದರು ಉತ್ತಮ ಬಾಂಧವ್ಯದಿಂದ ಚುರುಕಾಗಿ ಕರ್ತವ್ಯ ನಿರ್ವಹಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಿ ತಿಳಿಸಿದ್ದಾರೆ.

ಸಮನ್ವಯದಿಂದ ಕಾರ್ಯನಿರ್ವಹಿಸಿ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಿ: ಬಿಎಸ್​ವೈ

ನಗರದ ಕಡಕೊಳ ಗ್ರಾಮದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪ್ರವಾಹ ಕುರಿತ ಸಭೆಯಲ್ಲಿ ಮಾತಾನಾಡಿದ ಅವರು, ಯಾರಾದರೂ ದಾನಿಗಳು ನಿರಾಶ್ರಿತರಿಗೆ 100 ಮನೆಗಳನ್ನು ನಿರ್ಮಿಸಲು 5 ಕೋಟಿ ರೂ. ದೇಣಿಗೆ ನೀಡಲು ಮುಂದೆ ಬಂದರೆ ನಿರ್ಮಿಸಲಾಗುವ ಕಾಲೋನಿಗೆ ಅವರದೇ ಹೆಸರನ್ನು ಇಡಲಾಗುವುದು. ನಿವೇಶನವಿಲ್ಲದ, ನಿರಾಶ್ರಿತರಿಗೆ ಮನೆ ನಿರ್ಮಿಸಲು ಸರ್ಕಾರದಿಂದ ನಿವೇಶನ ಒದಗಿಸುವ ಸಂದರ್ಭದಲ್ಲಿ ನಿರಾಶ್ರಿತರಿಗೆ 30X50 ನಿವೇಶನವನ್ನು ನೀಡಿ ಸರ್ಕಾರದ ಯೋಜನೆಯಡಿ ಮನೆ ನಿರ್ಮಿಸಿ ಕೊಡಿ ಎಂದರು.

ಕೆಲವು ಸಂತ್ರಸ್ತರ ಮನೆ ಸಂಪೂರ್ಣ ನಾಶವಾಗಿದ್ದು, ಖಾತೆಗಳು ಅವರ ಪೂವರ್ಜರ ಹೆಸರಿನಲಿವೆ. ಅವರ ವಂಶವೃಕ್ಷಗಳನ್ನು ಪರಿಶೀಲಿಸಿ, ಸಂತ್ರಸ್ತರ ಹೆಸರಿನಲ್ಲಿ ಖಾತೆ ಮಾಡಿ ಅವರಿಗೆ ಪರಿಹಾರ ಒದಗಿಸಬೇಕಾಗಿ ತಿಳಿಸಿದರು. ಮನೆ ನಿರ್ಮಾಣ ಆಗುವ ತನಕ ಬಾಡಿಗೆ ಮನೆಯಲ್ಲಿ ಇರಲು ನಿರಾಶ್ರಿತರಿಗೆ ತಿಂಗಳಿಗೆ 5 ಸಾವಿರ ಬಾಡಿಗೆ ನೀಡಬೇಕು ಮತ್ತು ಪ್ರವಾಹದಲ್ಲಿ ಮೃತರಾದ ಕುಟುಂಬಕ್ಕೆ 5 ಲಕ್ಷ ರೂ. ತಕ್ಷಣದಲ್ಲೇ ನೀಡಬೇಕು. ಪರಿಹಾರ ನೀಡುವ ಸಂದರ್ಭದಲ್ಲಿ ಚುರುಕಾಗಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪ್ರವಾಹ ಪರಿಸ್ಥಿತಿಯಿಂದ ನಿರಾಶ್ರಿತರ ಕ್ಯಾಂಪ್‍ಗಳಲ್ಲಿ ವಾಸವಿರುವವರಿಗೆ ತಕ್ಷಣ 10,000 ರೂ. ನೀಡಬೇಕು ಹಾಗೂ ಸಂಪೂರ್ಣ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ. ಮತ್ತು ಮನೆಗೆ ಹಾನಿಯಾಗಿದ್ದಲ್ಲಿ ರಿಪೇರಿಗಾಗಿ 1 ಲಕ್ಷ ರೂ.ಗಳನ್ನು ಯಾವುದೇ ತಾರತಮ್ಯ ಮಾಡದೇ ಅಧಿಕಾರಿಗಳು ನೀಡಬೇಕು. ಪ್ರವಾಹ ಪರಿಸ್ಥಿತಿ ಉಂಟಾದ ಹಿನ್ನೆಲೆ ನಾಡಹಬ್ಬ ದಸರಾಗೆ ಯಾವುದೇ ಅಡಚಣೆಯಾಗುವುದಿಲ್ಲ ಹಾಗೂ ಮೈಸೂರಿಗೆ ಬರುವ ಪ್ರವಾಸಿಗರಿಗೆ ಇದರಿಂದ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಈಗಾಗಲೇ ಕೇಂದ್ರ ಸರ್ಕಾರದಿಂದ 6 ಸಾವಿರ ರೂ.ಗಳನ್ನ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಇದರೊಂದಿಗೆ ರಾಜ್ಯ ಸರ್ಕಾರದಿಂದ 4 ಸಾವಿರ ರೂ.ಗಳನ್ನು 2 ಕಂತುಗಳಲ್ಲಿ ನೀಡಲಾಗುವುದು. ಮೊದಲನೇ ಕಂತನ್ನು 3ರಿಂದ 4 ದಿನದೊಳಗಾಗಿ ಬಿಡುಗಡೆ ಮಾಡಲಾಗುವುದು. ಸಾಮಾಜಿಕ ಪಿಂಚಣಿಗಳು ಸರಿಯಾದ ಸಮಯದಲ್ಲಿ ಫಲಾನುಭವಿಗಳಿಗೆ ತಲುಪಬೇಕು. ಪ್ರವಾಹದಿಂದ ಜನರು ಸಂಕಷ್ಟದಲ್ಲಿದ್ದು, ಸಾಮಾಜಿಕ ಪಿಂಚಣಿ ಅನುದಾನಕ್ಕೆ ಯಾವುದೇ ತೊಂದರೆ ಇಲ್ಲದೇ ಬಿಡುಗಡೆ ಮಾಡುವಂತೆ ತಿಳಿಸಿದರು. ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಪ್ರವಾಹ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 12 ಕೋಟಿ ರೂ. ಅನುದಾನ ಲಭ್ಯವಿರುತ್ತದೆ. ಇನ್ನೂ ಹೆಚ್ಚಿನ ಅನುದಾನದ ಅವಶ್ಯಕತೆ ಇದ್ದಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ಸಂಸದ ಶ್ರೀನಿವಾಸ್ ಪ್ರಸಾದ್ ಮಾತನಾಡಿ, ಪರಿಹಾರ ಕೇಂದ್ರಗಳಲ್ಲಿ ಇರುವ ನಿರಾಶ್ರಿತರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು. ಯಾವುದೇ ದೂರು ಬಾರದ ರೀತಿ ನೋಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ರಾಜ್ಯ ಸಂಸದರಿಗೆ ಬರುವ ಸಂಸದರ ನಿಧಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದು ಉತ್ತಮ. ನಿರಾಶ್ರಿತರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವ ಕಾರ್ಯವನ್ನು ಜಿಲ್ಲಾಧಿಕಾರಿಗಳು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು ಎಂದರು.

Intro:ಬಿಎಸ್ ವೈ ಸಭೆBody:ಸಮನ್ವಯದಿಂದ ಕಾರ್ಯನಿರ್ವಹಿಸಿ ಸಂತ್ರಸ್ತರಿಗೆ ಪರಿಹಾರ ಕಲ್ಪಿಸಿ
ಮೈಸೂರು:-ಜಿಲ್ಲೆಯಲ್ಲಿ ಅನೇಕ ಸ್ಥಳಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ಜಿಲ್ಲೆಯ ಅಧಿಕಾರಿಗಳು, ಶಾಸಕರು, ಹಾಗೂ ಸಂಸದರು ಉತ್ತಮ ಬಾಂಧವ್ಯದಿಂದ ಚುರುಕಾಗಿ ಕರ್ತವ್ಯ ನಿರ್ವಹಿಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.
ನಗರದ ಕಡಕೊಳ ಗ್ರಾಮದಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪ್ರವಾಹ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.
ಯಾರಾದರೂ ದಾನಿಗಳು ನಿರಾಶ್ರಿತರಿಗೆ 100 ಮನೆಗಳನ್ನು ನಿರ್ಮಿಸಲು 5 ಕೋಟಿ ರೂ. ದೇಣಿಗೆ ನೀಡಲು ಮುಂದೆ ಬಂದರೆ, ನಿರ್ಮಿಸಲಾಗುವ ಕಾಲೋನಿಗೆ ಅವರದೇ ಹೆಸರನ್ನು ಇಡಲಾಗುವುದು ಎಂದರು.
ನಿವೇಶನವಿಲ್ಲದ ನಿರಾಶ್ರಿತರಿಗೆ ಮನೆ ನಿರ್ಮಿಸಲು ಸರ್ಕಾರದಿಂದ ನಿವೇಶನ ಒದಗಿಸುವ ಸಂದರ್ಭದಲ್ಲಿ ನಿರಾಶ್ರಿತರಿಗೆ 30*50 ನಿವೇಶನವನ್ನು ನೀಡಿ ಸರ್ಕಾರದ ಯೋಜನೆಯಡಿ ಮನೆ ನಿರ್ಮಿಸಿ ಕೊಡಿ ಎಂದರು.
ಕೆಲವು ಸಂತ್ರಸ್ತರ ಮನೆ ಸಂಪೂರ್ಣ ನಾಶವಾಗಿದ್ದು ಖಾತೆಗಳು ಅವರ ಪೂವರ್ಜರ ಹೆಸರಿನಲಿದೆ ಅವರ ವಂಶವೃಕ್ಷಗಳನ್ನು ಪರಿಶೀಲಿಸಿ ಸಂತ್ರಸ್ತರ ಹೆಸರಿನಲ್ಲಿ ಖಾತೆ ಮಾಡಿ ಅವರಿಗೆ ಪರಿಹಾರ ಒದಗಿಸಬೇಕಾಗಿ ತಿಳಿಸಿದರು.
ಮನೆ ನಿರ್ಮಾಣ ಆಗುವ ತನಕ ಬಾಡಿಗೆ ಮನೆಯಲ್ಲಿ ಇರಲು ನಿರಾಶ್ರಿತರಿಗೆ ತಿಂಗಳಿಗೆ 5 ಸಾವಿರ ಬಾಡಿಗೆ ನೀಡಬೇಕು ಮತ್ತು ಪ್ರವಾಹದಲ್ಲಿ ಮೃತರಾದ ಕುಟುಂಬಕ್ಕೆ 5 ಲಕ್ಷ ರೂ. ಗಳನ್ನು ತಕ್ಷಣದಲ್ಲೇ ನೀಡಬೇಕು ಪರಿಹಾರ ನೀಡುವ ಸಂದರ್ಭದಲ್ಲಿ ಚುರುಕಾಗಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ಪ್ರವಾಹ ಪರಿಸ್ಥಿತಿಯಿಂದ ನಿರಾಶ್ರಿತರ ಕ್ಯಾಂಪ್‍ಗಳಲ್ಲಿ ವಾಸವಿರುವವರಿಗೆ ತಕ್ಷಣ 10,000 ರೂ ನೀಡಬೇಕು ಹಾಗೂ ಸಂಪೂರ್ಣ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ ಮತ್ತು ಮನೆಗೆ ಹಾನಿಯಾಗಿದ್ದಲ್ಲಿ ರಿಪೇರಿಗಾಗಿ 1 ಲಕ್ಷ ರೂ. ಗಳನ್ನು ಯಾವುದೇ ತಾರತಮ್ಯ ಮಾಡದೇ ಅಧಿಕಾರಿಗಳು ನೀಡಬೇಕು ಎಂದು ತಿಳಿಸಿದರು.
ಪ್ರವಾಹ ಪರಿಸ್ಥಿತಿ ಉಂಟಾದ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾಗೆ ಯಾವುದೇ ಅಡಚಣೆಯಾಗುವುದಿಲ್ಲ ಹಾಗೂ ಮೈಸೂರಿಗೆ ಬರುವ ಪ್ರವಾಸಿಗರಿಗೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂದು ತಿಳಿಸಿದರು.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಈಗಾಗಲೇ ಕೇಂದ್ರ ಸರ್ಕಾರದಿಂದ 6 ಸಾವಿರ ರೂ. 3 ಕಂತುಗಳಲ್ಲಿ ನೀಡಲಾಗುತ್ತಿದೆ, ಇದರೊಂದಿಗೆ ರಾಜ್ಯ ಸರ್ಕಾರದಿಂದ 4 ಸಾವಿರ ರೂ.ಗಳನ್ನು 2 ಕಂತುಗಳಲ್ಲಿ ನೀಡಲಾಗುವುದು. ಮೊದಲನೇ ಕಂತನ್ನು 3 ರಿಂದ 4 ದಿನದೊಳಗಾಗಿ ಬಿಡುಗಡೆ ಮಾಡಲಾಗುವುದು. ಸಾಮಾಜಿಕ ಪಿಂಚಣಿಗಳು ಸರಿಯಾದ ಸಮಯದಲ್ಲಿ ಫಲಾನುಭವಿಗಳಿಗೆ ತಲುಪಬೇಕು. ಪ್ರವಾಹದಿಂದ ಜನರು ಸಂಕಷ್ಟದಲ್ಲಿದ್ದು, ಸಾಮಾಜಿಕ ಪಿಂಚಣಿ ಅನುದಾನಕ್ಕೆ ಯಾವುದೇ ತೊಂದರೆ ಇಲ್ಲದೇ ಬಿಡುಗಡೆ ಮಾಡುವಂತೆ ತಿಳಿಸಿದರು.
ಮೈಸೂರು ಜಿಲ್ಲೆಗೆ ಸಂಬಂಧಿಸಿದಂತೆ ಪ್ರವಾಹ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 12 ಕೋಟಿ. ರೂ. ಅನುದಾನ ಲಭ್ಯವಿರುತ್ತದೆ, ಇನ್ನೂ ಹೆಚ್ಚಿನ ಅನುದಾನದ ಅವಶ್ಯಕತೆ ಇದ್ದಲಿ, ಬಿಡುಗಡೆ ಮಾಡಲಾಗುವುದು ಎಂದರು.
ಸಂಸದ ಶ್ರೀನಿವಾಸ್ ಪ್ರಸಾದ್ ಅವರು ಮಾತನಾಡಿ ಪರಿಹಾರ ಕೇಂದ್ರಗಳಲ್ಲಿ ಇರುವ ನಿರಾಶ್ರಿತರಿಗೆ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು. ಯಾವುದೇ ದೂರು ಬಾರದ ರೀತಿ ನೋಡಿಕೊಳ್ಳುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದರು.
ರಾಜ್ಯ ಸಂಸದರಿಗೆ ಬರುವ ಸಂಸದರ ನಿಧಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದು ಉತ್ತಮ. ನಿರಾಶ್ರಿತರಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸಲು ಕಾರ್ಯವನ್ನು ಜಿಲ್ಲಾಧಿಕಾರಿಗಳು ಸರಿಯಾದ ರೀತಿಯಲ್ಲಿ ನಿರ್ವಹಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಸಂಸದರಾದ ಪ್ರತಾಪ್ ಸಿಂಹ, ವಿಧಾನಸಭಾ ಶಾಸಕರಾದ ರಾಮ್‍ದಾಸ್, ಹರ್ಷವರ್ಧನ್, ಎಲ್.ನಾಗೇಂದ್ರ, ಡಾ|| ಯತೀಂದ್ರ, ಅನಿಲ್ ಕುಮಾರ್ ಎಸ್., ಅಶ್ವಿನ್ ಕುಮಾರ್, ಮಹದೇವ್, ನಿರಂಜನ್, ವಿಧಾನ ಪರಿಷತ್ ಶಾಸಕರಾದ ಆರ್. ಧರ್ಮಸೇನ, ಎಸ್. ನಾಗರಾಜು ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.Conclusion:ಬಿಎಸ್ ವೈ ಸಭೆ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.