ETV Bharat / state

ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಶುಕ್ರವಾರ ಸರಳ ಆಚರಣೆ; ಪೂಜೆ ಸಲ್ಲಿಸಿ ದೇಗುಲಕ್ಕೆ ಬೀಗ - ಮೈಸೂರು ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಬೀಗ ಸುದ್ದಿ

ಎರಡನೇ ಆಷಾಢ ಶುಕ್ರವಾರ ಮುಂಜಾನೆ ಚಾಮುಂಡೇಶ್ವರಿಗೆ ಅಭಿಷೇಕ, ಪೂಜೆ ಸಲ್ಲಿಸಿದ ನಂತರ ದೇವಾಲಯಕ್ಕೆ ಬೀಗ ಹಾಕಲಾಯಿತು.

ಶ್ರೀ ಚಾಮುಂಡೇಶ್ವರಿ ದೇವಾಲಯ
ಶ್ರೀ ಚಾಮುಂಡೇಶ್ವರಿ ದೇವಾಲಯ
author img

By

Published : Jul 3, 2020, 11:49 AM IST

ಮೈಸೂರು: ಆಷಾಢ ತಿಂಗಳ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಇವತ್ತು ಚಾಮುಂಡಿ ಬೆಟ್ಟದಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿಗೆ ಸರಳ ರೀತಿಯಲ್ಲಿ ಪೂಜಾ ಕೈಂಕರ್ಯಗಳು ನೆರವೇರಿದವು.

ಮೈಸೂರಿನ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ 2ನೇ ಆಷಾಢ ಶುಕ್ರವಾರ ಸರಳ ಆಚರಣೆ

ದೇಗುಲದ ಪ್ರಧಾನ ಅರ್ಚಕರಾದ ಶಶಿಶೇಖರ ದೀಕ್ಷಿತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆಯಿತು. ದೇವಸ್ಥಾನದ ಆವರಣದೊಳಗೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯ ಮೆರವಣಿಗೆ ನಡೆಯಿತು. ಪ್ರತಿ ವರ್ಷ ಈ ದಿನ ಬೆಳಗ್ಗೆ 5.30 ರಿಂದ ರಾತ್ರಿ 10 ರವರೆಗೆ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶವಿರುತ್ತಿತ್ತು. ಆದರೆ, ಈ ಬಾರಿ ಕೊರೊನಾ ಹಾವಳಿಯಿಂದಾಗಿ ಬೆಳಗ್ಗೆ ಧಾರ್ಮಿಕ ವಿಧಿವಿಧಾನಗಳನ್ನು ಮುಗಿಸಿ ದೇಗುಲಕ್ಕೆ ಬೀಗ ಹಾಕಲಾಗಿದೆ.

ಪ್ರತಿ ವರ್ಷ ಈ ಸಂದರ್ಭದಲ್ಲಿ ದೇಗಲುಕ್ಕೆ ಆಗಮಿಸುವ ಅಪಾರ ಸಂಖ್ಯೆಯ ಭಕ್ತರಿಗೆ ಪ್ರಸಾದ ವಿತರಣೆ ನಡೆಯುತ್ತಿತ್ತು. ದೇವಿಯ ದರ್ಶನ ಭಾಗ್ಯ ಪಡೆಯುತ್ತಿದ್ದ ಭಕ್ತರಲ್ಲಿ ಸಂತಸದ ಹೊನಲು ಇರುತ್ತಿತ್ತು. ಆದರೆ ಈ ಬಾರಿ ಕೊರೊನಾತಂಕದಲ್ಲಿ ಚಾಮುಂಡಿ ಬೆಟ್ಟದಲ್ಲಿ ಭಕ್ತರ ಕಲರವವಿಲ್ಲ.

ಭಕ್ತಾದಿಗಳು ಮನೆಯಲ್ಲಿಯೇ ಕುಳಿತು ಪ್ರಾರ್ಥನೆ ಸಲ್ಲಿಸಿ ಕೊರೊನಾ ತಡೆಗಟ್ಟಲು ಸಹಕರಿಸಬೇಕು ಎಂದು ಪ್ರಧಾನ ಅರ್ಚಕ ಶಶಿಶೇಖರ ದೀಕ್ಷಿತ್ ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.