ಮೈಸೂರು:ಬಿಜೆಪಿ ಸರ್ಕಾರ ಕಲ್ಲು ಬಂಡೆಯಂತಿದೆ, ಯಡಿಯೂರಪ್ಪ ಅವರೇ ಮೂರುವರೆ ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಹೆಚ್.ವಿಶ್ವನಾಥ್ ಹೇಳಿದ್ರು.
ಹುಣಸೂರಿನಗದ್ದಿಗೆ ಸೇರಿ ವಿವಿಧ ಗ್ರಾಮಗಳಲ್ಲಿ ಮತಯಾಚಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದ ನಂತರ ಬಿಜೆಪಿ ಸರ್ಕಾರ ಪತನವಾಗುವುದಿಲ್ಲ. ಜನರು ಅಭಿವೃದ್ಧಿ ಕಡೆ ಮುಖ ಮಾಡುತ್ತಿದ್ದಾರೆ. ಫಲಿತಾಂಶದ ನಂತರ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ನಡೆಯಲಿದೆ. ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿರುವುದರಿಂದ ಅಭಿವೃದ್ಧಿ ಧ್ರುವೀಕರಣವಾಗಲಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡರೂ ಸ್ಥಳೀಯ ನಾಯಕರಿಗೆ ಮನಸ್ಸಿಲ್ಲ. ಒಳ ಒಪ್ಪಂದ ವರ್ಕೌಟ್ ಆಗುವುದಿಲ್ಲ. ಜನರು ನನ್ನನ್ನು ಕೈ ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕುಮಾರಸ್ವಾಮಿ ಅವರು ಬಿಜೆಪಿಯೊಂದಿಗೆ ಸರ್ಕಾರ ಮಾಡಿ ಉತ್ತಮ ಕೆಲಸ ಮಾಡಿದರು. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಇನ್ನಿಂಗ್ಸ್ ಆರಂಭಿಸಿದಾಗ ಮಾತಿನಲ್ಲಿ ಹಿಡಿತ ಕಳೆದುಕೊಂಡಿದ್ದಾರೆ ಎಂದು ಕುಟುಕಿದರು.