ಮೈಸೂರು: ಬಿಡುವಿನ ವೇಳೆಯಲ್ಲಿ ಸ್ವತಃ ಸರ್ಕಾರಿ ಶಾಲೆಗಳಿಗೆ ಹೋಗಿ ಪಾಠ ಮಾಡುವ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಎಲ್ಲಾ ಗುರುಗಳಿಗೆ ಶುಭ ಕೋರಿದ್ದಾರೆ.
ಇಂದು ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಲ್ಲಾ ಶಿಕ್ಷಕರಿಗೂ ಶುಭ ಕೋರಿದ್ದಾರೆ. ಆಚಾರ್ಯ ದೇವೋಭವ ಎನ್ನುವ ಸಂಸ್ಕೃತಿ ನಮ್ಮದು. ಹೆತ್ತ ತಾಯಿ, ಬದುಕು ಕಲಿಸುವ ತಂದೆ ಮತ್ತು ಸಂಸ್ಕಾರ ನೀಡಿದ ಗುರು ಮೂವರನ್ನು ಪೂಜನೀಯ ಸ್ಥಾನದಲ್ಲಿ ಇಟ್ಟು ಗೌರವಿಸುವುದು ಭಾರತೀಯ ಸಂಸ್ಕೃತಿಯ ಹೆಗ್ಗಳಿಕೆ. ಅಸಂಖ್ಯ ಮಕ್ಕಳ ಭವಿಷ್ಯ ರೂಪಿಸಿ ಆ ಮೂಲಕ ರಾಷ್ಟ್ರಕ್ಕೆ ಕೊಡುಗೆ ನೀಡುವ ಶಿಕ್ಷಕರ ಸೇವೆ ಮಹತ್ವವಾದದ್ದು. ಎಲ್ಲಾ ಗುರು ವೃಂದದವರಿಗೂ ಈ ದಿನದ ಶುಭಾಶಯಗಳು ಎಂದು ತಿಳಿಸಿದ್ದಾರೆ.