ETV Bharat / state

ಮಂತ್ರಿ ಮಂಡಲ ಇಲ್ಲ ಎಂದು ಭಾವಿಸಬೇಡಿ, ಬಿಜೆಪಿಯ ಪ್ರತಿಯೊಬ್ಬರೂ ಕೆಲಸ ಮಾಡ್ತಿದಾರೆ: ಪ್ರತಾಪ್​​​ ಸಿಂಹ - ಪ್ರವಾಹ ಪೀಡಿತ ಪ್ರದೇಶಗಳ ಜಾನುವಾರುಗಳಿಗೆ ಮೇವು

ಸಂಪುಟ ರಚನೆಯಾಗಿಲ್ಲ ಅಥವಾ ಮಂತ್ರಿಗಳಾದರೆ ಮಾತ್ರ ಕೆಲಸ ಮಾಡಬೇಕೆಂದೇನಿಲ್ಲ. ಬಿಜೆಪಿಯಲ್ಲಿ ಎಲ್ಲರೂ ಪ್ರವಾಹಪೀಡಿತರಿಗಾಗಿ ಕೆಲಸ ಮಾಡುತ್ತಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ಎಲ್ಲರಿಗೂ ಕೆಲಸ ನೀಡಿದ್ದಾರೆ ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ.

ಸಂಸದ ಪ್ರತಾಪ್​ ಸಿಂಹ
author img

By

Published : Aug 13, 2019, 8:07 PM IST

ಮೈಸೂರು: ಮಂತ್ರಿ ಮಂಡಲ ಇಲ್ಲ ಎಂದು ಭಾವಿಸಬೇಡಿ. ಯಡಿಯೂರಪ್ಪ ಅವರು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಜವಾಬ್ದಾರಿ ಕೊಟ್ಟು ಕೆಲಸ ಮಾಡಿಸುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಸಂಸದ ಪ್ರತಾಪ್​ ಸಿಂಹ

ಇಂದು ಕೃಷ್ಣ ಮಠದ ಆವರಣದಲ್ಲಿ ಪ್ರವಾಹಪೀಡಿತ ಪ್ರದೇಶಗಳ ಜಾನುವಾರುಗಳಿಗೆ ಮೇವು ಹಾಗೂ ಅಗತ್ಯ ವಸ್ತುಗಳನ್ನು ಕಳಿಸಿಕೊಡುವ ವಾಹನಕ್ಕೆ ಚಾಲನೆ ನೀಡಿ, ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿನ ಇಂತಹ ಪರಿಸ್ಥಿತಿಯಲ್ಲಿ ಮಂತ್ರಿ ಮಂಡಲ ಇಲ್ಲ ಎಂದು ಭಾವಿಸಬೇಡಿ. ಯಡಿಯೂರಪ್ಪ ಅವರು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಜವಾಬ್ದಾರಿ ಕೊಟ್ಟು ಕೆಲಸ ಮಾಡಿಸುತ್ತಿದ್ದಾರೆ.‌ ರಾಜ್ಯದಲ್ಲಿ ಮುಖ್ಯಮಂತ್ರಿ ಒಬ್ಬರೇ ಕೆಲಸ ಮಾಡುತ್ತಿದ್ದಾರೆ ಎಂದು ಭಾವಿಸಬೇಡಿ. ಪ್ರತಿಯೊಬ್ಬರು ಕೆಲಸ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ, ಉತ್ತರ ಕನ್ನಡ, ಮೈಸೂರು ಹಾಗೂ ಮಂಗಳೂರು ಭಾಗದಲ್ಲಿ ಧಾರಾಕಾರವಾಗಿ ಮಳೆ ಆದ ಪರಿಣಾಮ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದಕ್ಕೆ ಇಡೀ ರಾಜ್ಯದ ಜನತೆ ಸ್ಪಂದಿಸುತ್ತಿದ್ದಾರೆ ಎಂದರು.

ಮೈಸೂರಿನಲ್ಲಿ ರಾಮದಾಸ್ ರಾಜೀವ್ ಸ್ನೇಹ ಬಳಗ, ಪ್ರವಾಹಪೀಡಿತ ಪ್ರದೇಶಗಳಿಗೆ 4 ಲಾರಿ ಹುಲ್ಲು ಹಾಗೂ ಇತರೆ ಆಹಾರಗಳನ್ನು ಕಳಿಸಿಕೊಡುತ್ತಿದೆ. ಈ ಕಾರ್ಯಕ್ರಮಕ್ಕೆ ಪೇಜಾವರ ಶ್ರೀಗಳು ಉದ್ಘಾಟನೆ ಮಾಡುತ್ತಿರುವುದು ತುಂಬಾ ಒಳ್ಳೆಯ ಕೆಲಸ ಎಂದ ಸಂಸದರು, ರಾಮದಾಸ್ ಅವರನ್ನು ಮಂತ್ರಿ ಮಾಡುತ್ತಾರೆ ಎಂಬುದು ನಮ್ಮೆಲ್ಲರ ಆಶಯ. ಆದರೆ ಯಾವುದೇ ಮಂತ್ರಿ ಸ್ಥಾನ ಇಲ್ಲದೆಯೂ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಹಿಂದಿನ ಮೈತ್ರಿ ಸರ್ಕಾರದಲ್ಲಿ ಈ ರೀತಿ ಪ್ರವಾಹ ಬಂದಾಗ ಹೇಗೆ ನಡೆದುಕೊಂಡಿದ್ದಾರೆ, ಎಷ್ಟು ಕೆಲಸ ಮಾಡಿದ್ದಾರೆ ಎಂದು ಹೇಳುವ ಮೂಲಕ ಮೈತ್ರಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Intro:ಮೈಸೂರು: ಮಂತ್ರಿ ಮಂಡಲ ಇಲ್ಲ ಎಂದು ಬಾವಿಸಬೇಡಿ ಯಡಿಯೂರಪ್ಪ ಅವರು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಜವಾಬ್ದಾರಿ ಕೊಟ್ಟು ಕೆಲಸ ಮಾಡಿಸುತ್ತಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.

Body:ಇಂದು ಕೃಷ್ಣ ಮಠದ ಆವರಣದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಜಾನುವಾರುಗಳಿಗೆ ಮೇವು ಹಾಗೂ ಅಗತ್ಯ ವಸ್ತುಗಳನ್ನು ಕಳಿಸಿಕೊಡುವ ವಾಹನಕ್ಕೆ ಚಾಲನೆ ನೀಡಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ರಾಜ್ಯದ ಇಂತಹ ಪರಿಸ್ಥಿತಿಯಲ್ಲಿ ಮಂತ್ರಿ ಮಂಡಲ ಇಲ್ಲ ಎಂದು ಭಾವಿಸಬೇಡಿ. ಯಡಿಯೂರಪ್ಪ ಅವರು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನಿಗೂ ಜವಾಬ್ದಾರಿ ಕೊಟ್ಟು ಕೆಲಸ ಮಾಡಿಸುತ್ತಿದ್ದಾರೆ.‌ ರಾಜ್ಯದಲ್ಲಿ ಮುಖ್ಯಮಂತ್ರಿ ಒಬ್ಬರೆ ಕೆಲಸ ಮಾಡುತ್ತಿದ್ದಾರೆ ಎಂದು ಭಾವಿಸಬೇಡಿ ಪ್ರತಿಯೊಬ್ಬರು ಕೆಲಸ ಮಾಡುತ್ತಿದ್ದಾರೆ ಎಂದ ಸಂಸದ ಪ್ರತಾಪ್ ಸಿಂಹ ಉತ್ತರ ಕರ್ನಾಟಕ, ಉತ್ತರ ಕನ್ನಡ,ಮೈಸೂರು ಹಾಗೂ ಮಂಗಳೂರು ಭಾಗದಲ್ಲಿ ಧಾರಾಕಾರವಾಗಿ ಮಳೆ ಆದ ಪರಿಣಾಮ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಇದಕ್ಕೆ ಈಡಿ ರಾಜ್ಯವೇ ಈ ಸಂಕಷ್ಟಗಳಿಗೆ ಸ್ಪಂದಿಸುತ್ತಿವೆ . ಮೈಸೂರಿನಲ್ಲಿ ರಾಮದಾಸ್ ರಾಜಿವ್ ಸ್ನೇಹ ಬಳಗ ಪ್ರವಾಹ ಪೀಡಿತ ಪ್ರದೇಶಗಳಿಗೆ ೪ ಲಾರಿ ಹುಲ್ಲು ಹಾಗೂ ಇತರೆ ಆಹಾರಗಳನ್ನು ಕಳಿಸಿಕೊಡುತ್ತಿದೆ. ಈ ಕಾರ್ಯಕ್ರಮಕ್ಕೆ ಪೇಜಾವರ ಶ್ರೀಗಳು ಉದ್ಘಾಟನೆ ಮಾಡುತ್ತಿರುವುದು ತುಂಬಾ ಒಳ್ಳೆಯ ಕೆಲಸ ಎಂದ ಸಂಸದರು. ರಾಮದಾಸ್ ಅವರನ್ನು ಮಂತ್ರಿ ಮಾಡುತ್ತಾರೆ ಎಂಬುದು ನಮ್ಮೆಲ್ಲರ ಆಶಯ.
ಆದರೆ ಯಾವುದೇ ಮಂತ್ರಿ ಸ್ಥಾನ ಇಲ್ಲದೆಯೂ ಕೆಲಸ ಮಾಡುತ್ತಿದ್ದಾರೆ. ಎಂದು ಹೇಳಿದರ ಸಂಸದರು ಹಿಂದಿನ ಮೈತ್ರಿ ಸರ್ಕಾರದಲ್ಲಿ ಈ ರೀತಿ ಪ್ರವಾಹ ಬಂದಾಗ ಹೇಗೆ ನಡೆದುಕೊಂಡರು ಎಂದು ಹೇಳುವ ಮೂಲಕ ತೀವ್ರ ವಾಗ್ದಾಳಿ ನಡೆಸಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.