ಮೈಸೂರು: ತಲೆ ಮೇಲೆ ಬಸ್ ಚಕ್ರ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.

ಕೆಆರ್ಎಸ್ ಕಡೆಯಿಂದ ಮೈಸೂರಿಗೆ ಬರುತ್ತಿದ್ದ ಖಾಸಗಿ ಬಸ್, ಸಿಗ್ನಲ್ ಜಂಪ್ ಮಾಡಿ ಮುಂದೆ ಹೋಗಲು ಬೈಕ್ ಸವಾರ ಪ್ರಯತ್ನಿಸಿದಾಗ ಬಸ್ ಚಕ್ರಕ್ಕೆ ಸಿಲುಕಿ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಹೆಲ್ಮೆಟ್ ತಂದಿದ್ದರೂ ಅದನ್ನು ಧರಿಸದೆ ಬೈಕ್ ಚಾಲನೆ ಮಾಡುತ್ತಿದ್ದ ಸವಾರ ಆತುರವಾಗಿ ತೆರಳುತ್ತಿದ್ದಾಗ ಘಟನೆ ನಡೆದಿದೆ ಎನ್ನಲಾಗಿದೆ, ಯುವಕನ ಕುರಿತಾದ ಮಾಹಿತಿ ಇನ್ನು ತಿಳಿದು ಬಂದಿಲ್ಲ.ಮೃತ ದೇಹವನ್ನ ಕೆ.ಆರ್. ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ಅಪಘಾತ ಸಂಬಂಧ ವಿವಿ ಪುರಂ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.