ಮೈಸೂರು: ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಯುವಕನಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿ ಎಫ್ಟಿಎಸ್ಸಿ ನ್ಯಾಯಾಲಯ ತೀರ್ಪು ನೀಡಿದೆ.
ಶ್ರೀನಿವಾಸ್(19) ಶಿಕ್ಷೆಗೆ ಒಳಗಾದವ. ಈತ 2019ನೇ ಸಾಲಿನಲ್ಲಿ ವಿಜಯನಗರದಲ್ಲಿರುವ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ಆಶ್ರಯ ಪಡೆದಿದ್ದ. ಆ ವೇಳೆ ನಾಲ್ವರು ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ.
ಈ ಸಂಬಂಧ ಇಂದಿನ ಸಂಸ್ಥೆಯ ಅಧೀಕ್ಷಕರಾದ ಎಂ.ಕೆ.ಕುಮಾರಸ್ವಾಮಿಯವರು ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಶ್ರೀನಿವಾಸನನ್ನು ವಶಕ್ಕೆ ಪಡೆದ ಪೊಲೀಸರು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಇದೀಗ ಆರೋಪ ಸಾಬೀತಾದ ಹಿನ್ನೆಲೆ ಎಫ್ಟಿಎಸ್ಸಿ ನ್ಯಾಯಾಲಯ ಏ. 23ರಂದು ತೀರ್ಪು ಪ್ರಕಟಿಸಿದೆ.