ಮೈಸೂರು: ಸುಮಾರು ಹತ್ತು ದಿನಗಳಿಂದ ಯುವ ಮನಸ್ಸುಗಳನ್ನು ಹುಚ್ಚೆದ್ದು ಕುಣಿಸಿದ್ದ, ಪ್ರೇಕ್ಷರನ್ನು ಸಂಭ್ರಮದಲ್ಲಿ ತೇಲಿಸಿದ್ದ ದಸರಾ ಯುವ ಸಂಭ್ರಮ ಕಾರ್ಯಕ್ರಮಕ್ಕೆ ಅದ್ಧೂರಿ ತೆರೆ ಬಿದ್ದಿದೆ.
ನಗರದಲ್ಲಿರುವ ಮಾನಸ ಗಂಗೋತ್ರಿ ಬಯಲು ರಂಗಮಂದಿರದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಟ ಗೋಲ್ಡನ್ ಸ್ಟಾರ್ ಗಣೇಶ್, ಸೆ. 17ರಂದು ದಸರಾ ಯುವ ಸಂಭ್ರಮೋತ್ಸವಕ್ಕೆ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದ್ದರು. ಅಂದಿನಿಂದ ಪ್ರಾರಂಭವಾಗಿದ್ದ ದಸರಾ ಯುವ ಸಂಭ್ರಮ ಕಾರ್ಯಕ್ರಮಕ್ಕೆ ನಿನ್ನೆ ತೆರೆ ಬಿದ್ದಿದೆ.
ಈ ಕಾರ್ಯಕ್ರಮದಲ್ಲಿ ಸುಮಾರು 278 ಕಾಲೇಜುಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳ ತಂಡಗಳು ಹತ್ತು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಸಂಭ್ರಮ- ಸಡಗರದಿಂದ ಭಾಗವಹಿಸಿ ಜನರಿಗೆ ಮನರಂಜನೆ ನೀಡಿದವು. ಯುವ ಸಂಭ್ರಮದಲ್ಲಿ ಪರಿಸರ, ದೇಶಪ್ರೇಮ, ಪ್ಲಾಸ್ಟಿಕ್ ಮುಕ್ತ ರಾಜ್ಯ, ಯೋಧರ ಕಿಚ್ಚು, ನಾಡಿನ ಐತಿಹಾಸಿಕ ಪರಂಪರೆ ಸಾರುವ ಹಾಡುಗಳಿಗೆ ಮಾಡಿದ ನೃತ್ಯ ಎಲ್ಲರ ಮನಸೂರೆಗೊಂಡವು. ನೃತ್ಯದ ಮೋಡಿಗೆ ಯುವ ಸಮೂಹ ಕುಣಿದು ಕುಪ್ಪಳಿಸಿತು.