ರಾಯಚೂರು : ನಾರಾಯಣಪುರ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 1.77 ಲಕ್ಷ ಕ್ಯೂಸೆಕ್ ನೀರನ್ನ ಹರಿ ಬಿಡಲಾಗುತ್ತಿದೆ. ಇದರಿಂದ ಜಿಲ್ಲೆಗೆ ಮತ್ತೊಮ್ಮೆ ಪ್ರವಾಹ ಭೀತಿ ಎದುರಾಗಿದ್ದು, ಲಿಂಗಸುಗೂರು ತಾಲೂಕಿನ ನಡುಗಡ್ಡೆಗಳಿಗೆ ಸಂಪರ್ಕ ಕಲ್ಪಿಸುವ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ.
ಜಲಾಶಯಕ್ಕೆ 1.4 ಲಕ್ಷ ಕ್ಯೂಸೆಕ್ ಒಳಹರಿವಿನ ಪ್ರಮಾಣವಿದ್ದು, ಹಿಗಾಗಿ ಜಲಾಶಯದಿಂದ 1.77 ಲಕ್ಷ ಕ್ಯೂಸೆಕ್ ನೀರನ್ನ ಕೃಷ್ಣಾ ನದಿಗೆ ಹರಿ ಬೀಡಲಾಗುತ್ತಿದೆ. ಶೀಲಹಳ್ಳಿ ಬ್ರಿಡ್ಜ್ ಜಲಾವೃತ್ತಗೊಂಡಿದ್ದು, ಸೇತುವೆ ಮೇಲೆ ಸಂಚಾರವನ್ನ ಸ್ಥಗೀತಗೊಳಿಸಲಾಗಿದೆ.
ನಡುಗಡ್ಡೆಗಳಾದ ಮ್ಯಾದರಗಡ್ಡೆ, ಕರಕಲ್‌ಗಡ್ಡೆ ಸೇರಿದಂತೆ ನಾನಾ ನಡುಗಡ್ಡೆ ಪ್ರದೇಶಗಳಿಗೆ ಸಂಚರಿಸುವ ರಸ್ತೆ ಬಂದ್ ಆಗಿದ್ದು, ಪರ್ಯಾಯ ಮಾರ್ಗದಿಂದ ಸಂಚರಿಸುವಂತೆ ಸೂಚಿಸಲಾಗಿದೆ. ಪ್ರವಾಹದ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಮುನ್ನೆಚ್ಚರಿಕೆಯನ್ನು ನೀಡಲಾಗಿದೆ.
ಮಹಾರಾಷ್ಟ್ರದಲ್ಲಿ ಕೊಯ್ನಾ ಜಲಾಶಯ ಭರ್ತಿ ಆಗಿರುವುದರಿಂದ ಹೆಚ್ಚುವರಿ ನೀರನ್ನು ನದಿಗೆ ಹರಿ ಬಿಡಲಾಗುತ್ತಿದೆ. ಪರಿಣಾಮ ನದಿಗೆ ಹೆಚ್ಚುವರಿ ನೀರು ಹರಿದು ಬರುತ್ತಿದೆ.
ಇದನ್ನೂ ಓದಿ : ಮಹಾ ಮಳೆ ಅಬ್ಬರ - ಕೃಷ್ಣಾ ನದಿಯಲ್ಲಿ ಒಳ ಹರಿವು ಹೆಚ್ಚಳ - ಸೇತುವೆಗಳು ಜಲಾವೃತ!