ETV Bharat / state

ರಾಯಚೂರು ಜಿಲ್ಲೆಯಲ್ಲಿ 111 ಕೊರೊನಾ ಪ್ರಕರಣ ಪತ್ತೆ, ಇಬ್ಬರು ಸಾವು - Raichur corona latest news

ರಾಯಚೂರು ಜಿಲ್ಲೆಯಲ್ಲಿ ಇಂದು 111 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5630 ಕ್ಕೆ ತಲುಪಿದೆ.

Raichur
Raichur
author img

By

Published : Aug 20, 2020, 7:15 PM IST

ರಾಯಚೂರು : ಜಿಲ್ಲೆಯಲ್ಲಿ ಇಂದು 111 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5630 ಕ್ಕೆ ತಲುಪಿದೆ.

ಇಂದು ರಾಯಚೂರು ತಾಲೂಕಿನಲ್ಲಿ 64, ಮಾನವಿ 11, ಲಿಂಗಸೂಗೂರು 7, ಸಿಂಧನೂರು 7, ದೇವದುರ್ಗ 22 ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರ ಒಟ್ಟು ಸಂಖ್ಯೆ 68 ಕ್ಕೆ ಏರಿಕೆಯಾಗಿದೆ.

ಈವರೆಗೆ 3869 ಜನರು ಕೊರೊನಾದಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು1693 ಪ್ರಕರಣಗಳು ಸಕ್ರಿಯವಾಗಿವೆ.

ಸೋಂಕಿತರನ್ನು ಗುಣಲಕ್ಷಣದ ಆಧಾರದ ಮೇಲೆ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಲಾಗುತ್ತಿದ್ದು, ಸೋಂಕಿತರ ಸಂಪರ್ಕಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.