ರಾಯಚೂರು : ಜಿಲ್ಲೆಯಲ್ಲಿ ಇಂದು 113 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ 11,292 ಜನರಿಗೆ ಕೊರನಾ ಸೋಂಕು ದೃಢಪಟ್ಟಿದೆ.
ಈವರೆಗಿನ ಸೋಂಕಿತರಲ್ಲಿ 9,593 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ,. ಜಿಲ್ಲೆಯ ದೇವದುರ್ಗ ತಾಲೂಕಿನಿಂದ 69, ಲಿಂಗಸೂಗೂರು ತಾಲೂಕಿನಿಂದ 71, ಮಾನ್ವಿ ತಾಲೂಕಿನಿಂದ 87, ಸಿಂಧನೂರು ತಾಲೂಕಿನಿಂದ 73 ಮತ್ತು ರಾಯಚೂರು ತಾಲೂಕಿನಿಂದ 112 ಸೇರಿದಂತೆ ಒಟ್ಟು 412 ಜನರ ಮಾದರಿಯನ್ನು ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ವರದಿಗಾಗಿ ಇಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೋವಿಡ್-19 ಪರೀಕ್ಷೆಗಾಗಿ ಕಳುಹಿಸಲಾಗಿದ್ದ ಫಲಿತಾಂಶಗಳಲ್ಲಿ ಇಂದು 1,275 ಜನರಲ್ಲಿ ನೆಗೆಟಿವ್ ಬಂದಿದೆ. ಜಿಲ್ಲೆಯಿಂದ ಈವರೆಗೆ 11,3223 ಜನರ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅವುಗಳಲ್ಲಿ 10,1358 ವರದಿಗಳು ನೆಗೆಟಿವ್ ಬಂದಿವೆ. ಉಳಿದ 161 ಸ್ಯಾಂಪಲ್ಳ ಫಲಿತಾಂಶ ಬರಬೇಕಿದೆ.
ರಾಯಚೂರು ತಾಲೂಕಿನ ಸಾಂಸ್ಥಿಕ ಕ್ವಾರಂಟೈನ್ನಲ್ಲಿ 22, ಸಿಂಧನೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 9 ಹಾಗೂ ಲಿಂಗಸೂಗೂರು ತಾಲೂಕು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 14 ಜನರು ಸೇರಿದಂತೆ ಒಟ್ಟು 65 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.