ರಾಯಚೂರು: ಜಿಲ್ಲೆಯಲ್ಲಿ ಇಂದು ಒಂದೇ ದಿನ 117 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 931ಕ್ಕೆ ಏರಿಕೆಯಾಗಿದೆ.
ರಾಯಚೂರು ತಾಲೂಕಿನಲ್ಲಿ 49, ಮಾನವಿ 36, ದೇವದುರ್ಗ 9, ಸಿಂಧನೂರು 15, ಲಿಂಗಸೂಗೂರು ತಾಲೂಕಿನಲ್ಲಿ 8 ಸೋಂಕಿತರು ಪತ್ತೆಯಾಗಿದ್ದು, ಐಸೊಲೇಷನ್ ವಾರ್ಡ್ ಹಾಗೂ ಕ್ವಾರಂಟೈನ್ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲೆಯಲ್ಲಿ ಈವರೆಗೂ 30,268 ಜನರ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 26,099 ವರದಿಗಳು ನೆಗೆಟಿವ್ ಆಗಿವೆ. ಉಳಿದ 3,232 ಸ್ಯಾಂಪಲ್ಗಳ ಫಲಿತಾಂಶ ಬರುವುದು ಬಾಕಿಯಿದೆ.
ರಾಯಚೂರು ತಾಲೂಕಿನಲ್ಲಿ 78, ಸಿಂಧನೂರು 14, ಮಾನ್ವಿ 22 ಹಾಗೂ ಲಿಂಗಸೂಗೂರಿನ 21 ಸೇರಿ 135 ಜನರನ್ನು ಸಾಂಸ್ಥಿಕ ಕ್ವಾರಂಟೈನ್ನಲ್ಲಿ ಇರಿಸಿ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.