ರಾಯಚೂರು: ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ನಡೆಯುವ 92 ಗ್ರಾಮ ಪಂಚಾಯಿತಿಗಳ ಚುನಾವಣೆಗೆ 5,866 ನಾಮಪತ್ರಗಳು ಸ್ವೀಕೃತಗೊಂಡಿವೆ.
ಜಿಲ್ಲೆಯ 92 ಗ್ರಾಮ ಪಂಚಾಯಿತಿಗಳಿಗೆ 5,986 ನಾಮಪತ್ರ ಸಲ್ಲಿಕೆಯಾಗಿದ್ದವು. ಇದರಲ್ಲಿ 5,866 ನಾಮಪತ್ರಗಳು ಕ್ರಮ ಬದ್ದವಾಗಿದ್ದು, ಸ್ವೀಕೃತಗೊಂಡಿವೆ. ಉಳಿದಂತೆ 120 ನಾಮಪತ್ರಗಳು ತಿರಸ್ಕೃತಗೊಂಡಿವೆ. ಮೊದಲ ಹಂತದಲ್ಲಿ 92 ಗ್ರಾಮ ಪಂಚಾಯಿತಿಗಳ 1,816 ಸ್ಥಾನಗಳಿಗೆ ಚುನಾವಣೆ ನಡೆಯಲಿವೆ. ಇದರಲ್ಲಿ 6 ಸ್ಥಾನಗಳಿಗೆ ನಾಮಪತ್ರ ಸಲ್ಲಿಕೆಯಾಗಿಲ್ಲ.
ರಾಯಚೂರು ತಾಲೂಕಿನ 33 ಗ್ರಾಮ ಪಂಚಾಯಿತಿಗಳ 654 ಸ್ಥಾನಗಳಿಗೆ 2,272 ನಾಮಪತ್ರ ಸಲ್ಲಿಕೆಯಾಗಿದ್ದು, 2202 ನಾಮಪತ್ರಗಳು ಸ್ವೀಕೃತಗೊಂಡಿವೆ. ಇನ್ನುಳಿದ 70 ನಾಮಪತ್ರಗಳು ತಿರಸ್ಕೃತಗೊಂಡಿದ್ದರೆ, 5 ಸ್ಥಾನಗಳಿಗೆ ನಾಮಪತ್ರ ಸಲ್ಲಿಸದೆ ಖಾಲಿ ಉಳಿದಿವೆ. ಮಾನವಿ ತಾಲೂಕಿನ 17 ಗ್ರಾಮ ಪಂಚಾಯಿತಿಗಳ 341 ಸ್ಥಾನಗಳಿಗೆ 1,165 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇದರಲ್ಲಿ 1,160 ನಾಮಪತ್ರಗಳು ಸ್ವೀಕೃತಗೊಂಡಿದ್ದು, 5 ನಾಮಪತ್ರಗಳು ತಿರಸ್ಕೃತಗೊಂಡಿವೆ.
ಓದಿ: ರಾಯಚೂರು: ಮೊದಲ ಹಂತದ ಗ್ರಾಪಂ ಚುನಾವಣೆಗೆ 6,054 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಸಿರವಾರ ತಾಲೂಕಿನ 14 ಗ್ರಾ.ಪಂಗಳ 277 ಸ್ಥಾನಗಳಿಗೆ 941 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರೆ, 935 ನಾಮಪತ್ರಗಳು ಸ್ವೀಕೃತಗೊಂಡಿದ್ದು, 6 ತಿರಸ್ಕೃತಗೊಂಡಿವೆ. ದೇವದುರ್ಗ ತಾಲೂಕಿನ 28 ಗ್ರಾಮ ಪಂಚಾಯಿತಿಗಳ 544 ಸ್ಥಾನಗಳಿಗೆ, 1608 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಇದರಲ್ಲಿ 1569 ಅಭ್ಯರ್ಥಿಗಳು ನಾಮ ನಿರ್ದೇಶಿತರಾಗಿದ್ದಾರೆ. ಉಳಿದಂತೆ 39 ನಾಮಪತ್ರಗಳು ತಿರಸ್ಕೃತವಾಗಿದ್ದರೆ, ಒಂದು ಸ್ಥಾನಕ್ಕೆ ನಾಮಪತ್ರ ಸಲ್ಲಿಸಿಲ್ಲ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.