ರಾಯಚೂರು: ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಲವಾರು ಪೊಲೀಸ್ ಇಲಾಖೆ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಒಟ್ಟು 149 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ವಿವಿಧ ಠಾಣೆಗಳಲ್ಲಿ ಕಾರ್ಯ ನಿರ್ವಹಿಸುವ ಪಿಎಸ್‌ಐ, ರೈಟರ್, ಎಎಸ್‌ಐ, ಡಿಆರ್ ವಿಭಾಗದ ಪೊಲೀಸರು, ವೈರ್ಲೆಸ್ ವಿಭಾಗದ ಸಿಬ್ಬಂದಿ ಸೇರಿದಂತೆ ಹಲವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ.
149 ಪೊಲೀಸರಲ್ಲಿ 31 ಮಂದಿ ಗುಣಮುಖರಾಗಿದ್ದು, ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. 115 ಸಿಬ್ಬಂದಿ ಕೋವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 21 ಜನ ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ.
ಕೊರೊನಾ ಸೋಂಕು ದೃಢಪಟ್ಟ ಠಾಣೆಗಳನ್ನು ಸ್ಯಾನಿಟೈಜ್ ಮಾಡಿದ ಬಳಿಕ 14 ದಿನಗಳ ಕಾಲ ಬಂದ್ ಮಾಡಲಾಗಿದೆ. ಕೊರೊನಾ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ಪೊಲೀಸ್ ಸಿಬ್ಬಂದಿಯ ಕೊರತೆ ಎದುರಾಗಿತ್ತು. ಗೃಹ ರಕ್ಷಕದಳ ಸಿಬ್ಬಂದಿ ಮೂಲಕ ಇಲಾಖೆಯ ಕಾನೂನು ಪರಿಪಾಲನೆ ಮಾಡಲಾಗುತ್ತಿದೆ. ರ್ಯಾಂಡಮ್ ಆ್ಯಟಿಜನ್ ಕಿಟ್ ಮೂಲಕ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ.