ETV Bharat / state

ರಾಯಚೂರಿನಲ್ಲಿ ಇಂದು 16 ಕೊರೊನಾ ಕೇಸ್​​

author img

By

Published : Jun 2, 2020, 10:37 PM IST

ರಾಯಚೂರು ಜಿಲ್ಲೆಯಲ್ಲಿ ಇಂದು 16 ಕೊರೊನಾ ಕೇಸ್​ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಇಂದು 197 ಜನರ ಗಂಟಲಿನ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

16 Corona case in Raichur today
ರಾಯಚೂರಿನಲ್ಲಿ ಇಂದು 16 ಕೊರೊನಾ ಕೇಸ್​​

ರಾಯಚೂರು : ಜಿಲ್ಲೆಯಲ್ಲಿ ಇಂದು 16 ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 197 ಜನರ ಗಂಟಲಿನ ದ್ರವ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಜಿಲ್ಲೆಯಿಂದ ಈವರೆಗೆ 16,219 ಜನರ ಗಂಟಲಿನ ದ್ರವ್ಯ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ಅದರಲ್ಲಿ 14,130 ವರದಿಗಳು ನೆಗೆಟಿವ್ ಆಗಿವೆ. ಉಳಿದ 1,850 ಸ್ಯಾಂಪಲ್‍ಗಳ ಫಲಿತಾಂಶ ಬರಬೇಕಿದೆ.

ಫಿವರ್ ಕ್ಲಿನಿಕ್‍ಗಳಲ್ಲಿಂದು 536 ಜನರನ್ನು ಥರ್ಮಲ್ ಸ್ಕ್ರೀನಿಂಗ್‍ಗೆ ಒಳಪಡಿಸಲಾಗಿದೆ.ಇಂದು 16 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರೆಲ್ಲರೂ ದೇವದುರ್ಗ ತಾಲೂಕಿನವರಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟಾರೆ 233 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕೋವಿಡ್-19 ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.