ರಾಯಚೂರು : ಜಿಲ್ಲೆಯಲ್ಲಿ ಇಂದು 164 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ರಾಯಚೂರು ತಾಲೂಕಿನಲ್ಲಿ 64 , ಮಾನವಿ 19 , ಲಿಂಗಸೂಗೂರು 17, ಸಿಂಧನೂರು 39, ದೇವದುರ್ಗ 23 ಪ್ರಕರಣಗಳು ಇಂದು ವರದಿಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 11,925ಕ್ಕೆ ತಲುಪಿದೆ.
ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 10,224 ರೋಗದಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನುಳಿದ 1,564 ಪ್ರಕರಣಗಳು ಸಕ್ರಿಯವಾಗಿವೆ.
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ 137 ಜನರು ಮೃತಪಟ್ಟಿದ್ದಾರೆ.