ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಂದು ಸಹ ಏರಿಕೆಯಾಗಿದೆ. 164 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 3953 ತಲುಪಿದೆ.
ರಾಯಚೂರು ತಾಲೂಕಿನಲ್ಲಿ 111, ಮಾನವಿ 16, ಲಿಂಗಸೂಗೂರು 12, ಸಿಂಧನೂರು 20, ದೇವದುರ್ಗ 4 ಸೇರಿದಂತೆ ಒಟ್ಟು 164 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 2345 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನು 1568 ಪ್ರಕರಣಗಳು ಸಕ್ರಿಯವಾಗಿವೆ.
ಸೋಂಕಿತರಿಗೆ ಕೋವಿಡ್ ಕೇರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಂಪರ್ಕಗಳ ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.