ರಾಯಚೂರು: ಜಿಲ್ಲೆಯಲ್ಲಿ ಇಂದು 184 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,047ಕ್ಕೆ ತಲುಪಿದೆ.
ಇಂದು ರಾಯಚೂರು ತಾಲೂಕಿನಲ್ಲಿ 119, ದೇವದುರ್ಗ 4, ಲಿಂಗಸೂಗೂರು 32, ಸಿಂಧನೂರು 13, ಮಾನವಿಯಲ್ಲಿ 16 ಪ್ರಕರಣಗಳು ಪತ್ತೆಯಾಗಿವೆ.
ಇಬ್ಬರು ಸೋಂಕಿತರು ಇಂದು ಮೃತಪಡುವ ಮೂಲಕ ಮೃತರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 5,645 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ, ಇನ್ನುಳಿದ 1324 ಪ್ರಕರಣಗಳು ಸಕ್ರಿಯವಾಗಿವೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.