ರಾಯಚೂರು: ಜಿಲ್ಲೆಯಲ್ಲಿ ಇಂದು 195 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 9,818ಕ್ಕೆ ತಲುಪಿದೆ.
ರಾಯಚೂರು ತಾಲೂಕಿನಲ್ಲಿ 71, ಮಾನವಿ 14, ಲಿಂಗಸೂಗೂರು 28, ಸಿಂಧನೂರು 55, ದೇವದುರ್ಗದಲ್ಲಿ 27 ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ಪತ್ತೆಯಾಗಿರುವ ಸೋಂಕಿತರ ಪೈಕಿ 8,135 ಜನ ಗುಣಮುಖವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರೆ. ಇನ್ನುಳಿದಂತೆ 1,556 ಪ್ರಕರಣಗಳು ಸಕ್ರಿಯವಾಗಿವೆ. ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಇವತ್ತು ಯಾವುದೇ ಸಾವು ಸಂಭವಿಸಿಲ್ಲ.
ರಿಮ್ಸ್, ಓಪೆಕ್ ಕೋವಿಡ್ ಆಸ್ಪತ್ರೆಯಲ್ಲಿ 292 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತಾಲೂಕಿನ ಸಾಂಸ್ಥಿಕ ಕ್ವಾರಂಟೈನ್ನಲ್ಲಿ 377 ಮಂದಿಯನ್ನು ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ 186 ಜನ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 740 ಜನ ಹೋಮ್ ಕ್ವಾರಂಟೈನ್ನಲ್ಲಿದ್ದಾರೆ.