ರಾಯಚೂರು: ಜಿಲ್ಲೆಯ ಕೊರೊನಾ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದ್ದು, ಇಂದು 201 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಬರೋಬ್ಬರಿ 4154ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.
ರಾಯಚೂರು 90, ಮಾನವಿ 32, ಲಿಂಗಸೂಗೂರು 42, ಸಿಂಧನೂರು 31, ದೇವದುರ್ಗ 6 ಪ್ರಕರಣಗಳು ದೃಢಪಟ್ಟಿವೆ. ಈವರೆಗೆ 2394 ಜನರು ಗುಣಮುಖವಾಗಿ, ಮನೆಗೆ ವಾಪಾಸ್ ಆಗಿದ್ದಾರೆ. ಇನ್ನೂ 1718 ಪ್ರಕರಣಗಳು ಸಕ್ರಿಯವಾಗಿವೆ.
ಇಂದು ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದು, ಮೃತರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. ರೋಗ ಲಕ್ಷಣದ ಆಧಾರದ ಮೇಲೆ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಕೇರ್, ಹೋಮ್ ಕ್ವಾರಂಟೈನ್ ಮಾಡಲಾಗುತ್ತಿದ್ದು, ಸಂಪರ್ಕಗಳ ಪತ್ತೆ ಹಚ್ಚಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತು ಕೋವಿಡ್ ಮಾರ್ಗಸೂಚಿ ಅನ್ವಯ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಸ್ಯಾನಿಟೈಜರ್ ಬಳಸುವಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗಿದೆ.