ರಾಯಚೂರು: ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಇಂದು ಮತ್ತೆ 202 ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಸೋಂಕಿತರ ಸಂಖ್ಯೆ 3,790ಕ್ಕೆ ಏರಿಕೆಯಾಗಿದೆ.
ಮಾನವಿ 17, ಲಿಂಗಸುಗೂರು 21, ಸಿಂಧನೂರು 28, ದೇವದುರ್ಗ 34 ಹಾಗೂ ರಾಯಚೂರು ತಾಲೂಕಿನಲ್ಲಿ 102 ಪ್ರಕರಣಗಳು ಪತ್ತೆಯಾಗಿದೆ.
ಇಂದು ಇಬ್ಬರು ಸೋಂಕಿತರು ಮೃತಪಟ್ಟಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಈವರೆಗೆ ಪತ್ತೆಯಾಗಿರುವ ಸೋಂಕಿತರಲ್ಲಿ 2321 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
1,429 ಕೊರೊನಾ ಪ್ರಕರಣಗಳು ಸಕ್ರಿಯವಾಗಿದ್ದು, ಸೋಂಕಿತರನ್ನು ರೋಗದ ಲಕ್ಷಣದ ಆಧಾರದ ಮೇಲೆ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ನಲ್ಲಿ ದಾಖಲಿಸಲಾಗಿದೆ. ಅವರು ಸಂಪರ್ಕದಲ್ಲಿ ಇರುವವರನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
ಸೋಂಕು ಕಂಡು ಬಂದ ಪ್ರದೇಶಗಳಲ್ಲಿ ಸ್ಯಾನಿಟೈಸಿಂಗ್ ಮಾಡಲಾಗುತ್ತಿದೆ.