ರಾಯಚೂರು : ಜಿಲ್ಲೆಯಲ್ಲಿ ಇಂದು ಒಂದೇ ದಿನ 212 ಹೊಸ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 2,593ಕ್ಕೆ ತಲುಪಿದೆ.
ಕೊರೊನಾ ಸೋಂಕಿತರ ಸಂಪರ್ಕಗಳನ್ನ ಪತ್ತೆ ಹಚ್ಚುವ ಕಾರ್ಯ ನಡೆದಿದೆ. ರೋಗದ ಗುಣಲಕ್ಷಣದ ಆಧಾರದ ಮೇಲೆ ಕೋವಿಡ್ ಕೇರ್ ಹಾಗೂ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗುತ್ತಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.
![ರಾಯಚೂರು ಕೊರೊನಾ ಸುದ್ದಿ 212 corona positive cases in Raichuru](https://etvbharatimages.akamaized.net/etvbharat/prod-images/kn-rcr-02-corona-212positive-cases-7202440_02082020171140_0208f_1596368500_454.jpg)
ಔಷಧಿ ಸಿಂಪಡಣೆ : ಗಡಿಭಾಗದಲ್ಲಿ ರಾಯಚೂರು ತಾಲೂಕಿನ ತಲಮಾರಿ ಗ್ರಾಮವನ್ನ ಸಂಪೂರ್ಣ ಸ್ಯಾನಿಟೈಸಿಂಗ್ ಮಾಡಲಾಗಿದೆ. ಗ್ರಾಮದಲ್ಲಿ ಕೊರೊನಾ ಸೋಂಕಿನ ಪ್ರಕರಣ ಹೆಚ್ಚಾಗಿ ಕಂಡು ಬಂದಿರುವುದಿಂದ ಇಡೀ ಗ್ರಾಮವನ್ನೇ ಸೀಲ್‌ಡೌನ್ ಮಾಡಿ ಅಗತ್ಯ ಕ್ರಮಕೈಗೊಳ್ಳಲಾಗಿತ್ತು. ಸೋಂಕು ತಕ್ಕಮಟ್ಟಿಗೆ ಹತೋಟಿಗೆ ಬಂದಿದ್ದು, ಇಂದು ಸಹ ಔಷಧಿ ಸಿಂಪಡಣೆ ಮಾಡಲಾಯಿತು.
ಜಿಲ್ಲೆಯಲ್ಲಿ ಈವರೆಗೆ 1,624 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 942 ಸಕ್ರಿಯ ಪ್ರಕರಣಗಳಿವೆ. 27 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ.