ರಾಯಚೂರು: ಜಿಲ್ಲೆಯಲ್ಲಿ ಮಂಗಳವಾರ 242 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.
ರಾಯಚೂರು ತಾಲೂಕಿನಲ್ಲಿ 118, ದೇವದುರ್ಗ- 69, ಸಿಂಧನೂರು - 34, ಮಾನ್ವಿ - 12 ಹಾಗೂ ಲಿಂಗಸುಗೂರು ತಾಲೂಕಿನಲ್ಲಿ 9 ಜನರಿಗೆ ಸೋಂಕು ದೃಢಪಟ್ಟಿದೆ. ಗುಣಮುಖರಾದ 21 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಒಪೆಕ್ ಮತ್ತು ರಿಮ್ಸ್ ಆಸ್ಪತ್ರೆಯಲ್ಲಿ 110 ಜನರಿಗೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 49 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
1,028 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ. ಪ್ರಯೋಗಾಲಯದಿಂದ 2,386 ಜನರ ವರದಿ ಬರುವುದು ಬಾಕಿಯಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.