ರಾಯಚೂರು: ಜಿಲ್ಲೆಯಲ್ಲಿ ಇಂದು 25 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 656ಕ್ಕೆ ಏರಿಕೆಯಾಗಿದೆ.
ಇಂದು ಸೋಂಕಿತರಲ್ಲಿ ರಾಯಚೂರು ತಾಲೂಕಿನ 15, ಸಿಂಧನೂರು ತಾಲೂಕಿನ 9, ದೇವದುರ್ಗ ತಾಲೂಕಿನ ಒಬ್ಬರಿದ್ದಾರೆ. ಈವರೆಗೆ ಸೋಂಕಿನಿಂದ 463 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು,186 ಕೊರೊನಾ ಸಕ್ರಿಯ ಪ್ರಕರಣಗಳಿವೆ.
ಸ್ಥಳೀಯ ಒಪೆಕ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್‌ನಲ್ಲಿ 125 ಜನ, ಕ್ವಾರಂಟೈನ್‌ನಲ್ಲಿ 61 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಇದುವರೆಗೂ 7 ಜನ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತದ ಪ್ರಕಟಣೆಯಲ್ಲಿ ತಿಳಿಸಿದೆ.