ETV Bharat / state

ಶಾಲಾ ಮಕ್ಕಳಿದ್ದ ಆಟೋ ಪಲ್ಟಿ: 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ - ರಾಯಚೂರು ಅಪಘಾತ ಸುದ್ದಿ

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿ. 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ. ರಾಯಚೂರು ಜಿಲ್ಲೆಯ ಕುಣಿಕೆಲ್ಲೂರ ಗ್ರಾಮದ ಸಮೀಪ ಘಟನೆ.

Road accident in Raichur
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿ
author img

By

Published : Nov 18, 2022, 12:15 PM IST

ರಾಯಚೂರು: ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋ ಪಲ್ಟಿಯಾಗಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಣಿಕೆಲ್ಲೂರ ಗ್ರಾಮದ ಬಳಿ ನಡೆದಿದೆ.

ಜಿಲ್ಲೆಯ ಮಸ್ಕಿ ತಾಲೂಕಿನ ಕುಣಿಕೆಲ್ಲೂರದಿಂದ ಸಂತೆಕೆಲ್ಲೂರಿಗೆ 40ಕ್ಕೂ ಹೆಚ್ಚು ಮಕ್ಕಳು ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಚಾಲಕನ ನಿರ್ಲಕ್ಷ್ಯದಿಂದ ಆಟೋ ಪಲ್ಟಿಯಾಗಿದೆ ಎನ್ನಲಾಗಿದೆ. ಸದ್ಯ ಗಾಯಗೊಂಡ ಮಕ್ಕಳನ್ನು ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಹುತೇಕ ಮಕ್ಕಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಪಾಲಕರು ಹಾಗೂ ಸಂಬಂಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆ ಆಗಿದ್ದರಿಂದ ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆ ನೀಡಲು ಹರಸಾಹಸ ಪಡುವ ಸ್ಥಿತಿ ವಾತಾವರಣ ನಿರ್ಮಾಣವಾಗಿದೆ.

ಸಂತೆಕೆಲ್ಲೂರ ಗ್ರಾಮದಿಂದ ಮಟ್ಟೂರು ಮಧ್ಯೆ ಸಾರಿಗೆ ಬಸ್ ಸೌಲಭ್ಯವಿಲ್ಲ. ಹೀಗಾಗಿ ಮಕ್ಕಳು ಖಾಸಗಿ ವಾಹನದಲ್ಲಿ ಶಾಲಾ - ಕಾಲೇಜಿಗೆ ಹೋಗಿ ಬರಬೇಕಿದೆ. ಬಸ್ ಸೌಲಭ್ಯ ಕಲ್ಪಿಸಲು ಸಂಬಂಧಿಸಿದವರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದಕ್ಕೆ ಸ್ಥಳೀಯ ಚುನಾಯಿತ ಪ್ರತಿನಿಧಿಗಳ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ: ಚಲಿಸುತ್ತಿರುವ ಕೆಎಸ್‌ಆರ್‌ಟಿಸಿ ಬಸ್‌ನಿಂದ ಜಿಗಿದು ಯುವಕ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.