ರಾಯಚೂರು: ನಗರದ ನವೋದಯ ವೈದ್ಯಕೀಯ ಕಾಲೇಜಿನಲ್ಲಿ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಅಭಿಯಾನ ನಡೆಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಎಸ್ ಎಸ್ ಅಮರಪ್ಪ, ಪ್ರತಿ ಸಂಚಾರಿ ನಿಯಮಗಳನ್ನ ಪಾಲಿಸುವ ಮೂಲಕ ರಸ್ತೆ ಅಪಘಾತಕ್ಕೆ ಕಡಿವಾಣ ಹಾಕಬಹುದು. ಹೀಗಾಗಿ ವಾಹನ ಚಾಲನೆ ಮಾಡುವಾಗ ಹೆಲ್ಮೇಟ್, ಸೀಟ್ ಬೆಲ್ಟ್ ಧರಿಸಬೇಕು. ದೇಶದಲ್ಲಿ ಅಪಘಾತ ಪ್ರಕರಣಗಳಲ್ಲಿ ಸಾವು-ನೋವುಗಳು ಹೆಚ್ಚುತ್ತಿರುವುದು ನೋವಿನ ಸಂಗತಿ. ಪ್ರತಿಯೊಬ್ಬರೂ ತಮ್ಮ ಸ್ವ-ರಕ್ಷಣೆಗಾಗಿ ಸಂಚಾರ ನಿಯಮಗಳ ಪಾಲನೆ ಮಾಡಿ ಉತ್ತಮ ನಾಗರಿಕರಾಗಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ನವೋದಯ ಶಿಕ್ಷಣ ಸಂಸ್ಥೆಯ ವಿವಿಧ ವಿಭಾಗದ ಮುಖ್ಯಸ್ಥರು,ಪ್ರಾದ್ಯಾಪಕರು,ಉಪಸ್ಥಿತರಿದ್ದರು.