ರಾಯಚೂರು: ಕೊರೊನಾ ವಿರುದ್ಧ ಹೋರಾಡುತ್ತಿರುವ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಕ್ಕೆ ಶಿಲ್ಪಾ ಮೆಡಿಕೇರ್ ಕಂಪನಿಯಿಂದ 35 ಲಕ್ಷ ರೂ. ದೇಣಿಗೆ ನೀಡಲಾಗಿದೆ.
ಪ್ರಧಾನಮಂತ್ರಿ ನಾಗರಿಕ ನೆರವು ಮತ್ತು ತುರ್ತು ಪರಿಸ್ಥಿತಿ ಪರಿಹಾರ ನಿಧಿ (ಪಿಎಂ ಕೇರ್ಸ್)ಗೆ 25 ಲಕ್ಷ ರೂಪಾಯಿ ಹಾಗೂ ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿ ಮೊತ್ತದ ಹಣವನ್ನ ಜಿಲ್ಲಾಧಿಕಾರಿ ಮೂಲಕ ನೀಡಲಾಗಿದೆ.
ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ದೇಶದ ಜನತೆ ಬೆಂಬಲಿಸುವಂತೆ ಪ್ರಧಾನಿ ಮನವಿ ಮಾಡಿದ್ರು. ಈ ಹಿನ್ನೆಲೆಯಲ್ಲಿ ಶಿಲ್ಪಾ ಮೆಡಿಕೇರ್ ಕಂಪನಿಯ ವ್ಯವಸ್ಥಾಪಕ ವಿಷ್ಣುಕಾಂತ್ ಚೆಕ್ ಮೂಲಕ ದೇಣಿಗೆ ನೀಡಿದ್ದಾರೆ.